ಹೊಸದಿಲ್ಲಿ: ಸಮ-ಬೆಸ ಯೋಜನೆ ಉಲ್ಲಂಘಿಸಿದರೆ 4 ಸಾವಿರ ದಂಡ
Team Udayavani, Oct 17, 2019, 4:53 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಾಯು ಮಾಲಿನ್ಯ ಹಾಗೂ ವಾಹನ ದಟ್ಟನೆಯನ್ನು ನಿಯಂತ್ರಿಸಲು ಅಲ್ಲಿನ ಸರಕಾರ ಕಠಿನ ನಿಯಮಗಳನ್ನು ಜಾರಿಗೊಳಿಸುತ್ತಾ ಬಂದಿದೆ. ದಿಲ್ಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಹೊಸ ಸರಕಾರ ಅಸ್ಥಿತ್ವಕ್ಕೆ ಬಂದ ಬಳಿಕ ವಾಹನ ದಟ್ಟನೆ ಮತ್ತು ಸಂಚಾರ ನಿಯಂತ್ರಣಕ್ಕಾಗಿ ಸಮ ಸಮ-ಬೆಸ ಯೋಜನೆಯನ್ನು ಜಾರಿಗೊಳಿಸಿತ್ತು. ಇದೀಗ ಈ ನಿಯಮವನ್ನು ಬಿಗಿಗೊಳಿಸಿದ್ದು ಮೀರಿದರೆ 4000 ರೂ. ದಂಡ ವಿಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಪರಿಷ್ಕ¢ತ ನಿಯಮ ನವೆಂಬರ್ 4ರಿಂದ 15ರ ವರೆಗೆ ಜಾರಿಯಲ್ಲಿರಲಿದೆ. ವಾಯುಮಾಲಿನ್ಯ ತಡೆಗಟ್ಟಲು ಈ ಸಮ-ಬೆಸ ಯೋಜನೆಯನ್ನು ಕಠಿನಗೊಳಿಸುವುದು ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಶಾಲಾ ಮಕ್ಕಳಿಗೆ ವಿನಾಯಿತಿ
ಈ ಯೋಜನೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುವ ದ್ವಿಚಕ್ರ ವಾಹನಗಳು ಸೇರಿದಂತೆ ಶಾಲಾ ಬಸ್ಗಳಿಗೆ ವಿನಾಯಿತಿ ನೀಡಲಾಗಿದೆ. ಮಾತ್ರವಲ್ಲದೇ ಅಂಗವಿಕಲರಿಗೆ ಸೇರಿದ ವಾಹನಗಳು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಸಿಜೆಐ, ಲೋಕಸಭಾ ಸ್ಪೀಕರ್ಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಸಿಎಂ ಮತ್ತು ಸಚಿವರಿಗೆ ವಿನಾಯಿತಿ ಇರುವುದಿಲ್ಲ. ಮಾತ್ರವಲ್ಲದೇ ಹೊರ ರಾಜ್ಯದಿಂದ ಬರುವ ವಾಹನಗಳಿಗೂ ಈ ನಿಯಮ ಅನ್ವಯವಾಗಲಿದೆ. ಬೆಳಗ್ಗೆ 8ರಿಂದ ಸಂಜೆ 8ರ ವರೆಗೆ ಈ ನಿಯಮ ಜಾರಿಯಲ್ಲಿರಲಿದೆ.
ಕಳೆದ ವರ್ಷ ದಿಲ್ಲಿ ಭಾರೀ ಪ್ರಮಾಣದ ಧೂಳು ನಿರ್ಮಾಣವಾಗಿತ್ತು. ಇದು ಹಲವು ಸಮಸ್ಯೆಗಳಿಗೆ ಎಡೆಮಾಡಿಕೊಟ್ಟಿತ್ತು.ಸದ್ಯ ಅಂತಹ ಪರಿಸ್ಥಿತಿ ಮರು ಕಳಿಸಬಾರದು ಎಂಬ ನಿಟ್ಟಿನಲ್ಲಿ ಸರಕಾರ ಈ ಕ್ರಮ ಕೈಗೊಂಡಿದೆ. ದಿಲ್ಲಿ ನಗರದ 12 ಕಡೆಗಳಲ್ಲಿ ಅತೀ ಹೆಚ್ಚು ವಾಯು ಮಾಲಿನ್ಯ ದಾಖಲಾಗುತ್ತಿದೆ. ಇದಕ್ಕಾಗಿ ಸರಕಾರ ಈ ಕ್ರಮ ಕೈಗೊಂಡಿದೆ. ಮಾತ್ರವಲ್ಲದೇ ಈ ತಿಂಗಾಳಾಂತ್ಯದಲ್ಲಿ ದೀಪಾವಳಿ ಹಬ್ಬಬರಲಿದ್ದು ವಾಯು ಮತ್ತಷ್ಟು ಮಲೀಬವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.