Eye Drops; ಕಣ್ಣಿಗೆ ಕನ್ನಡಕ ಬೇಕಿಲ್ಲ , ಹನಿ ಬಿಂದು ಬಿಟ್ಟರೆ ಸಾಕು!
ಸನಿಹ ದೃಷ್ಟಿದೋಷ ಇರುವವರಿಗೆ ಕಣ್ಣಿನ ಹನಿ ಸಿದ್ಧ
Team Udayavani, Sep 4, 2024, 7:10 AM IST
ಹೊಸದಿಲ್ಲಿ: ಸನಿಹದಲ್ಲಿರುವ ವಸ್ತು ಗಳನ್ನು ಸರಿಯಾಗಿ ನೋಡಲು ಕಣ್ಣಿಗೆ ಕನ್ನಡಕ ಧರಿಸಬೇಕಾದ ಪರಿಸ್ಥಿತಿ ಸದ್ಯದಲ್ಲೇ ದೂರವಾಗುವ ನಿರೀಕ್ಷೆಯಿದೆ.
ಹೌದು, ಇನ್ನು ಓದಲು ಕನ್ನಡಕ ಬೇಕೇಬೇಕು ಎಂದೇನಿಲ್ಲ. ಅದರ ಬದಲಿಗೆ ಐ ಡ್ರಾಪ್ ಹಾಕಿದರೆ ಸಾಕು. ಎಲ್ಲ ಅಕ್ಷರಗಳೂ ಸ್ಪಷ್ಟವಾಗಿ ಗೋಚರಿಸುತ್ತವೆ.
ಮುಂಬಯಿಯಲ್ಲಿ ನೆಲೆ ಹೊಂದಿರುವ ಎಂಟೋಡ್ ಫಾರ್ಮಾಸ್ಯೂಟಿ ಕಲ್ಸ್ ಎಂಬ ಕಂಪೆನಿ “ಪ್ರಸ್‌ವು’ ಎಂಬ ಕಣ್ಣಿನ ಹನಿ (ಐ ಡ್ರಾಪ್ಸ್) ಸಿದ್ಧಪಡಿಸಿದೆ. ಇದು ಕಣ್ಣಿನ ಪಾಪೆಯ ಗಾತ್ರವನ್ನು ತಗ್ಗಿಸಿ, ವಸ್ತುಗಳು ಸ್ಪಷ್ಟವಾಗಿ ಗೋಚರಿಸುವಂತೆ ಮಾಡುತ್ತದೆ. ಇದನ್ನು ಬಳಸಿದರೆ ಮುಂದಿನ 6 ತಾಸುಗಳ ಕಾಲ ಸನಿಹದಲ್ಲಿರುವ ವಸ್ತುಗಳನ್ನು ಸ್ಪಷ್ಟವಾಗಿ ನೋಡಬಹುದು. ಮೊದಲ ಹನಿ ಹಾಕಿ 3ರಿಂದ 6 ತಾಸುಗಳ ಒಳೊಳಗೆ ಇನ್ನೊಂದು ಹನಿ ಹಾಕಿದರೆ ಈ ನೋಟದ ಅವಧಿ ಇನ್ನಷ್ಟು ದೀರ್ಘವಾಗಲಿದೆ ಎಂದು ಎಂಟೋಡ್ ಫಾರ್ಮಾ ಕಂಪೆನಿಯ ಸಿಇಒ ನಿಖೀಲ್ ಕೆ. ಮಸೂರ್ಕರ್ ಹೇಳಿದ್ದಾರೆ.
ಭಾರತೀಯರ ಮೇಲೂ ಪರೀಕ್ಷೆ
ಈಗಾಗಲೇ ಇಂತಹ ಔಷಧಗಳು ವಿದೇಶ ಗಳಲ್ಲಿ ಲಭ್ಯವಿವೆ. ಆದರೆ ಅವನ್ನು ಭಾರತೀಯ ಕಣ್ಣುಗಳಿಗೆ ಹಾಕಿ ಪರಿಶೀಲನೆ ನಡೆಸಿರಲಿಲ್ಲ. ಈ ಔಷಧವನ್ನು ಭಾರತೀಯ ಕಣ್ಣುಗಳಿಗೆ 2 ವರ್ಷ ಹಾಕಿ ಪರಿಶೀಲಿಸಲಾಗಿದೆ. ಒಟ್ಟು 10 ಸ್ಥಳಗಳಲ್ಲಿ 250 ಮಂದಿಯ ಮೇಲೆ ಇದರ ಪರೀಕ್ಷೆ ನಡೆಸಲಾಗಿದೆ. ಇದಕ್ಕೆ ಔಷಧ ನಿಯಂತ್ರಣ ಸಂಸ್ಥೆ ಅನುಮತಿಯನ್ನೂ ನೀಡಿದೆ.
350 ರೂ.ಗಳಿಗೆ ಲಭ್ಯ
ಈ ವರ್ಷದ ಅಕ್ಟೋಬರ್ ಮೊದಲ ವಾರ ದಿಂದ ಭಾರತೀಯ ಫಾರ್ಮಸಿಗಳಲ್ಲಿ ಐ ಡ್ರಾಪ್ ಸಿಗಲಿದೆ. 40ರಿಂದ 55 ವಯೋಮಿತಿಯವರು ಇದನ್ನು ಬಳಸಬಹುದು. ಇದಕ್ಕೆ 350 ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ ನೋಂದಾಯಿತ ವೈದ್ಯರ ಸೂಚನೆಯ ಮೇರೆಗೆ ಮಾತ್ರ ಇದನ್ನು ಖರೀದಿಸಬಹುದು ಎಂದೂ ಮಸೂರ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.