ಜಮ್ಮು ಕಾಶ್ಮೀರಕ್ಕೆ ಹೊಸ ಮನ್ವಂತರ
ಲೋಕಸಭೆಯಲ್ಲೂ ವಿಧೇಯಕಕ್ಕೆ ಮನ್ನಣೆ
Team Udayavani, Aug 7, 2019, 6:00 AM IST
ಮಸೂದೆಗೆ ಒಪ್ಪಿಗೆ ಸಿಕ್ಕ ಬಳಿಕ ಶಾಗೆ ಮೋದಿ ಅಭಿನಂದನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಹೊಸ ಇತಿಹಾಸ ಬರೆದಿರುವ ಕೇಂದ್ರ ಸರ್ಕಾರ, ಈ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ಮತ್ತು 35(ಎ)ಪರಿಚ್ಛೇದವನ್ನು ಬದಿಗೆ ಸರಿಸುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಲೋಕಸಭೆಯಲ್ಲೂ ಈ ಎರಡೂ ಮಸೂದೆಗಳಿಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ವಿಧೇಯಕದ ಪರವಾಗಿ 370 ಮತ್ತು ವಿರುದ್ಧವಾಗಿ 70 ಮತಗಳು ಬಿದ್ದಿವೆ. ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಅಮಿತ್ ಶಾ ಸೇರಿದಂತೆ ಎಲ್ಲ ಸಂಸದರನ್ನು ಶ್ಲಾಘಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಐತಿಹಾಸಿಕ ನಿರ್ಧಾರದಿಂದ ಗಲಿಬಿಲಿಗೊಂಡಿರುವ ನೆರೆಯ ಪಾಕಿಸ್ತಾನ ಯುದ್ಧದ ಮಾತುಗಳನ್ನಾಡಿದೆ. ಅಂತಾರಾಷ್ಟ್ರೀಯ ಸಮುದಾಯದ ಬೆಂಬಲ ಕೋರಿತಾದರೂ, ಅಮೆರಿಕ, ಯುಎಇಯಂಥ ದೇಶಗಳು ಇದು ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರ ಎಂದು ಹೇಳುವ ಮೂಲಕ ಪಾಕ್‌ಗೆ ಭ್ರಮ ನಿರಸನಗೊಳಿಸಿವೆ.
ಸೋಮವಾರವಷ್ಟೇ ರಾಜ್ಯಸಭೆಯಲ್ಲಿ ಸುದೀರ್ಘ ಚರ್ಚೆ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಹಿಂತೆಗೆತ ಮಸೂದೆ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವ ಮಸೂದೆಗೆ ಒಪ್ಪಿಗೆ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಂಗಳವಾರ ಬೆಳಗ್ಗೆಯೇ ಲೋಕಸಭೆಯಲ್ಲೂ ಈ ಎರಡೂ ಮಸೂದೆಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷ ಸ್ಥಾನಮಾನ ತೆಗೆಯುವ ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವ ನಿರ್ಧಾರವನ್ನು ಯಾರಿಂದರೂ ತಡೆಯಲು ಸಾಧ್ಯವಿಲ್ಲ ಎಂದೂ ಖಡಕ್ಕಾಗಿಯೇ ಹೇಳಿದರು. ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡುವಾಗ ಇದರಲ್ಲಿ ಪಿಒಕೆ ಮತ್ತು ಚೀನಾ ಆಕ್ರಮಿತ ಆಕ್ಸಾಯ್ ಚಿನ್ ಕೂಡ ಬರುತ್ತವೆ ಎಂದೂ ಸ್ಪಷ್ಟಪಡಿಸಿದರು.
ಚೀನಾ ಅಪಸ್ವರ
• ನರೇಂದ್ರ ಮೋದಿ, ಪ್ರಧಾನಿ
• ಅಮಿತ್ ಶಾ, ಕೇಂದ್ರ ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.