ಹೊಸ ಸಂಸತ್ ಕಟ್ಟಡ ಉದ್ಘಾಟನೆ; ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ: Sanjay Raut
Team Udayavani, May 27, 2023, 6:25 AM IST
ಮುಂಬಯಿ: ಹೊಸ ಸಂಸತ್ ಭವನದ ಉದ್ಘಾಟನೆ ರಾಷ್ಟ್ರೀಯ ಕಾರ್ಯಕ್ರಮವೇ ಹೊರತು ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ ಎಂದು 20 ವಿರೋಧ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರದ ನಡುವೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಶುಕ್ರವಾರ ಹೇಳಿದ್ದಾರೆ.
ಭಾನುವಾರ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಉದ್ಘಾಟನೆಗೆ ಆಹ್ವಾನಿಸದೆ ಬಿಜೆಪಿ ಅವರನ್ನು ಪಕ್ಕಕ್ಕೆ ತಳ್ಳಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿರುವ ಮಧ್ಯೆ ಹೊಸ ಸಂಸತ್ತು ಕಟ್ಟಡದ ಉದ್ಘಾಟನೆಗೆ ನಾವು ವಿರೋಧಿಗಳಲ್ಲ. ಭಾರತದ ರಾಷ್ಟ್ರಪತಿಯನ್ನು ಏಕೆ ಆಹ್ವಾನಿಸಲಾಗಿಲ್ಲ ಎಂಬುದನ್ನು ನಾವು ತಿಳಿಯಲು ಬಯಸುತ್ತೇವೆ. ರಾಜ್ಯಸಭೆಯ ಅಧ್ಯಕ್ಷರಾಗಿರುವ ಉಪರಾಷ್ಟ್ರಪತಿ ಎಲ್ಲಿದ್ದಾರೆ ಎಂದು ಪ್ರಶ್ನಿಸಿರುವ ಸಂಸದ ರಾವುತ್, ಆಹ್ವಾನ ಪತ್ರಿಕೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ಹೆಸರು ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿ ಈಗ ಅಚ್ಛೇ ದಿನ್ ನೋಡಿ ಎಲ್. ಕೆ. ಅಡ್ವಾಣಿ ಅವರನ್ನು ಸಮಾರಂಭದಿಂದ ದೂರವಿಡಲಾಗಿದೆಯೇ ಎಂದು ರಾವುತ್ ಆಶ್ಚರ್ಯಪಟ್ಟರು. ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಅಸ್ತಿತ್ವದಲ್ಲಿರುವ ಸಂಸತ್ತಿನ ಕಟ್ಟಡದ ವಿಸ್ತರಣೆಯನ್ನು ಇಂದಿರಾ ಗಾಂಧಿ ಉದ್ಘಾಟಿಸಿದರು ಮತ್ತು ರಾಜೀವ್ ಗಾಂಧಿ ಅವರು ಸಂಸತ್ತಿನ ಗ್ರಂಥಾಲಯವನ್ನು ಉದ್ಘಾಟಿಸಿದರು ಎಂದು ಬಿಜೆಪಿ ನೆಪ ಹೇಳುತ್ತಿದೆ. ವಿಸ್ತರಣಾ ಕಟ್ಟಡ, ಗ್ರಂಥಾಲಯ ಹಾಗೂ ಮುಖ್ಯ ಕಟ್ಟಡಕ್ಕೆ ವ್ಯತ್ಯಾಸವಿದೆ ಎಂದರು.
ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮುಂದಿನ ವರ್ಷ ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಲ್ಲಿ 22 ರಲ್ಲಿ ಸ್ಪರ್ಧಿಸಲು ಬಯಸಿದೆ ಮತ್ತು ಅದರ ಮಿತ್ರಪಕ್ಷ ಬಿಜೆಪಿ ಬೇಡಿಕೆಯನ್ನು ಒಪ್ಪುವುದಿಲ್ಲ ಎಂಬ ವರದಿಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ರಾವುತ್, ಶಿಂಧೆ ನೇತೃತ್ವದ ಸೇನೆಯನ್ನು ರಾಜಕೀಯ ಪಕ್ಷವೆಂದು ಪರಿಗಣಿಸುವುದಿಲ್ಲ ಎಂದು ಹೇಳಿದರು. ಕೇವಲ 22 ಸ್ಥಾನಗಳನ್ನು ಬಿಡಿ, ಐದು ಸ್ಥಾನಗಳನ್ನು ಪಡೆದರೂ ಅದು ಸಾಕಾಗುತ್ತದೆ. ಶಿಂಧೆ ಸೇನೆ ಎಲ್ಲಾ 48 ಸ್ಥಾನಗಳಲ್ಲಿ ಸ್ಪರ್ಧಿಸಿದರೂ ನಮಗೆ ಚಿಂತೆಯಿಲ್ಲ. ನಮ್ಮ 19 ಲೋಕಸಭಾ ಸ್ಥಾನಗಳ ಯಥಾಸ್ಥಿತಿಯಲ್ಲಿ ಉಳಿಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.