ಡಿಕೆಶಿ ಪತ್ನಿ, ಅಮ್ಮನಿಗೆ ಹೊಸ ಸಮನ್ಸ್
Team Udayavani, Oct 31, 2019, 3:05 AM IST
ನವದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಕುಮಾರ್‌ರವರ ತಾಯಿ ಗೌರಮ್ಮ (85) ಹಾಗೂ ಅವರ ಪತ್ನಿ ಉಷಾ ಶಿವಕುಮಾರ್‌ರವರಿಗೆ ಹೊಸದಾಗಿ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.), ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಆದರೆ, ಗೌರಮ್ಮ ಹಾಗೂ ಉಷಾ ಶಿವಕುಮಾರ್ ಅವರು ತಮಗೆ ಸಮನ್ಸ್ ತಲುಪಿಲ್ಲವೆಂದು ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ತಿಳಿಸಿದ್ದಾರೆ.
ಬುಧವಾರ ನಡೆದ ವಿಚಾರಣೆಯಲ್ಲಿ, ಇ.ಡಿ. ಪರವಾಗಿ ಹಾಜರಿದ್ದ ಕೇಂದ್ರ ಸರ್ಕಾರದ ಕಾನೂನು ಸಲಹೆಗಾರ ಅಮಿತ್ ಮಹಾಜನ್, ಗೌರಮ್ಮ ಹಾಗೂ ಉಷಾರವರಿಗೆ ಈ ಹಿಂದೆ ನೀಡಲಾಗಿದ್ದ ಸಮನ್ಸ್‌ಗಳನ್ನು ನ್ಯಾಯಾಲ ಯದಲ್ಲಿ ಪ್ರಶ್ನಿಸಿದ್ದರು. ಆದರೆ, ನ್ಯಾಯಪೀಠಕ್ಕೆ ಅವರ ವಿಚಾರಣೆಯ ಅಗತ್ಯತೆಯನ್ನು ವಿವರಿಸಲಾಗಿದ್ದು, ಆ ಹಿನ್ನೆಲೆಯಲ್ಲಿ, ಅವರಿಬ್ಬರಿಗೂ ಹೊಸದಾಗಿ ಸಮನ್ಸ್ ಜಾರಿಗೊಳಿಸಲಾಗಿದೆ ಎಂದರು.
ಆದರೆ, ಇದನ್ನು ಆಕ್ಷೇಪಿಸಿದ ಗೌರಮ್ಮ ಮತ್ತು ಉಷಾ ಪರ ವಕೀಲರು, ಸಿಆರ್‌ಪಿಸಿ ನಿಯಮಗಳ ಪ್ರಕಾರ, 15ಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಗೆ ಹಾಗೂ 65ಕ್ಕಿಂತ ಹೆಚ್ಚು ವಯಸ್ಸಿನ ಮಹಿಳೆಯರಿಗೆ ಪೊಲೀಸ್ ಠಾಣೆಗೆ ವಿಚಾರಣೆಗೆ ಬರುವಂತೆ ಸೂಚಿಸುವ ಹಾಗಿಲ್ಲ. ಅದೇ ನಿಯಮ ಇ.ಡಿ.ಗೂ ಅನ್ವಯವಾಗುತ್ತದೆ ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬ್ರಿಜೇಶ್ ಸೇಥಿ, ಪ್ರಕರಣದ ಮುಂದಿನ ವಿಚಾರಣೆಯನ್ನು ನ. 4ಕ್ಕೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.