ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆಗೆ ಹೊಸ ವ್ಯವಸ್ಥೆ
ಇಂದು ಹೊಸ ಸುಧಾರಣಾ ಕ್ರಮ ಜಾರಿ ಸಾಧ್ಯತೆ
Team Udayavani, Jul 1, 2019, 12:46 PM IST
ಹೊಸದಿಲ್ಲಿ: ಸರಕು ಸೇವಾ ತೆರಿಗೆ (ಜಿಎಸ್ಟಿ) ಜಾರಿಯಾಗಿ ಸೋಮವಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಸೋಮವಾರ ಹೊಸ ಕ್ರಮಗಳನ್ನು ಘೋಷಿಸಲು ನಿರ್ಧರಿಸಲಾಗಿದ್ದು, ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆಗೆ ವ್ಯವಸ್ಥೆಯನ್ನು ಪರಿಚಯಿಸುವ ಸಾಧ್ಯತೆಯಿದೆ.
2017ರ ಜು. 1ರಂದು ಜಿಎಸ್ಟಿ ಜಾರಿಗೆ ಬಂದಿತ್ತು. ಹಲವು ಹಂತದ ಹಲವು ವಿಧದ ತೆರಿಗೆಗಳನ್ನು ರದ್ದುಗೊಳಿಸಿ ದೇಶಾದ್ಯಂತ ಏಕರೂಪದ ತೆರಿಗೆಯನ್ನು ಜಾರಿಗೊಳಿಸಿರುವುದು ದೇಶದ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ್ದಾಗಿದೆ. ಜಾರಿ ವ್ಯತ್ಯಯದ ಬಗ್ಗೆ ವಿಪಕ್ಷಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದವಾದರೂ ಮುಂದೆ ದಿನಗಳಲ್ಲಿ ತೆರಿಗೆ ಪದ್ಧತಿಯಲ್ಲಿ ಸುಧಾರಣೆ ಕಂಡುಬಂದಿತ್ತು.
ಹೊಸ ರಿಟರ್ನ್ಸ್ ವ್ಯವಸ್ಥೆ, ಕ್ಯಾಶ್ ಲೆಡ್ಜರ್ ವ್ಯವಸ್ಥೆ ಮತ್ತು ಏಕ ರಿಫಂಡ್ ಬಟವಾಡೆ ವ್ಯವಸ್ಥೆಯನ್ನು ಕೂಡ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೋಮವಾರದಿಂದ ಹೊಸ ರಿಟರ್ನ್ಸ್ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದ್ದು, ಅಕ್ಟೋಬರ್ನಿಂದ ಇದು ಕಡ್ಡಾಯವಾಗಲಿದೆ.
ಇದಕ್ಕೆ “ಸಹಜ’ ಮತ್ತು “ಸುಗಮ’ ಎಂದು ಹೆಸರಿಡಲಾಗಿದೆ. ಸೋಮವಾರ ನಡೆಯುವ ಕಾರ್ಯಕ್ರಮದಲ್ಲಿ ವಿತ್ತ ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಪ್ರಮುಖ ಕಾರ್ಯದರ್ಶಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿ ದ್ದಾರೆ. “ಜಿಎಸ್ಟಿ ಫಾರ್ ಎಂಎಸ್ಎಂಇ’ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆ) ಪುಸ್ತಕ ಬಿಡುಗಡೆ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.