New year ಮೋದಿ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8-10 ರೂ. ಕಡಿತ ?
Team Udayavani, Dec 29, 2023, 6:00 AM IST
ಹೊಸದಿಲ್ಲಿ: ಹೊಸವರ್ಷದ ಆಗಮನ ಹಾಗೂ ಲೋಕಸಭೆ ಚುನಾವಣೆಯ ಹೊಸ್ತಿಲಿಗೆ ದೇಶ ತಲುಪುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶವಾಸಿಗಳಿಗೆ ಬಂಪರ್ ಕೊಡುಗೆ ನೀಡಲು ಸಜ್ಜುಗೊಂಡಿದೆ. ಹೊಸ ವರ್ಷಕ್ಕೆ ಕಾಲಿಡುವ ಮುನ್ನವೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಪ್ರತೀ ಲೀಟರ್‌ಗೆ 8 ರಿಂದ 10 ರೂ.ಗಳಷ್ಟು ಕಡಿತ ಘೋಷಿಸುವ ಸಾಧ್ಯತೆಗಳಿದೆ ಎಂದು ಹಲವು ಇಂಗ್ಲಿಷ್ ವೆಬ್‌ಸೈಟ್‌ಗಳು ವರದಿ ಮಾಡಿವೆ.
ಮೂಲಗಳ ಪ್ರಕಾರ ಈಗಾಗಲೇ ಇಂಧನ ಸಚಿವಾಲ ಯವು ಈ ಸಂಬಂಧಿಸಿದಂತೆ ಪ್ರಸ್ತಾವನೆಯನ್ನೂ ಸಿದ್ದಪಡಿಸಿದ್ದು, ಪ್ರಧಾನಿ ಅವರ ಅನುಮೋದನೆಗಾಗಿ ಕಾಯುತ್ತಿದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿ ರುವುದು ಈ ನಿರ್ಣಯಕ್ಕೆ ಕಾರಣ ಎನ್ನಲಾಗಿದೆ. 2022-23ನೇ ಆರ್ಥಿಕ ವರ್ಷದಲ್ಲಿ ಪ್ರತೀ ಬ್ಯಾರೆಲ್‌ಗೆ 93.15 ಡಾಲರ್‌ಗಳಿಷ್ಟಿದ್ದ ಕಚ್ಚಾ ತೈಲ ಬೆಲೆ ಪ್ರಸಕ್ತ ವಿತ್ತೀಯ ವರ್ಷದ ಎಪ್ರಿಲ್ -ಮಾರ್ಚ್ ಅವಧಿಯಲ್ಲಿ ಪ್ರತೀ ಬ್ಯಾರೆಲ್‌ಗೆ 77.14 ಡಾಲರ್‌ಗಳಷ್ಟು ಕಡಿಮೆ ಯಾಗಿತ್ತು. ಸೆಪ್ಟಂಬರ್ ಮತ್ತು ಅಕ್ಟೋಬರ್‌ನಲ್ಲಿ ಮಾತ್ರ 93.54 ಡಾಲರ್ ಹಾಗೂ 90.08 ಡಾಲರ್‌ಗೆ ತಗ್ಗಿತ್ತು. ಇನ್ನು ಇಂಧನ ಬೆಲೆ ಕಡಿತವು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ತರಲಿದೆ ಎಂದೂ ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.