ಗುಜರಾತ್‌ನ ನವಜಾತ ಅವಳಿ ಶಿಶುಗೆ ಕೋವಿಡ್
Team Udayavani, May 23, 2020, 8:06 AM IST
ಸಾಂದರ್ಭಿಕ ಚಿತ್ರ
ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ 6 ದಿನಗಳ ಹಿಂದೆಯಷ್ಟೇ ಜನಿಸಿದ್ದ ನವಜಾತ ಅವಳಿ ಶಿಶುಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ, ಗುಜರಾತ್‌ನಲ್ಲಿ ನವಜಾತ ಶಿಶುಗಳಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣ ಇದಾಗಿದೆ. ಮೊಲಿಪುರ ಗ್ರಾಮದ ಮಹಿಳೆಯೊಬ್ಬರು ವಡ್ನಗರ ಸಿವಿಲ್ ಆಸ್ಪತ್ರೆಯಲ್ಲಿ ಗಂಡು ಹಾಗೂ ಹೆಣ್ಣು ಅವಳಿ ಮಕ್ಕಳಿಗೆ ಮೇ16ರಂದು ಜನನ ನೀಡಿದ್ದರು. ಈ ವೇಳೆ ತಾಯಿಯಲ್ಲಿ ಕೋವಿಡ್ ಇರುವುದು ಪತ್ತೆಯಾಗಿತ್ತು, ಅವಳಿಗಳನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ವೈರಸ್ ಇರುವುದು ದೃಢಪಟ್ಟಿತ್ತು. ಸದ್ಯ ಅವಳಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಅಭಿವೃದ್ಧಿ ಅಧಿಕಾರಿ ಮನೋಜ್ ದಕ್ಷಿಣಿ ತಿಳಿಸಿದ್ದಾರೆ. ಮೊಲಿಪುರ ಗ್ರಾಮದಲ್ಲಿ ಮುಂಬೈನಿಂದ ಬಂದಿರುವ ಹೆಚ್ಚಿನ ಜನರಿದ್ದಾರೆ, ಇವರಿಂದಾಗಿ ಹೆಚ್ಚಿನ ಕೋವಿಡ್ ಪ್ರಕರಣಗಳು ಗ್ರಾಮದಲ್ಲಿ ಕಂಡು ಬಂದಿದೆ ಎಂದು ಮನೋಜ್ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.