ಮಾನವ ಹಕ್ಕುಗಳ ಆಯೋಗದ ಪಾತ್ರ ಹಿರಿದು: ಪ್ರಧಾನಿ ಮೋದಿ
Team Udayavani, Oct 13, 2018, 10:17 AM IST
ಹೊಸದಿಲ್ಲಿ: ಸರಕಾರದ ಅಭಿವೃದ್ಧಿ ಗುರಿಗಳು ಸಮರ್ಪಕವಾಗಿ ಸಾಕಾರಗೊಳ್ಳುವಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಪಾತ್ರ ಹಿರಿದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಶುಕ್ರವಾರ ನಡೆದ ಆಯೋಗದ 25ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಸಮಸ್ತ ನಾಗರಿಕರಿಗೆ ಅವರ ಹಕ್ಕುಗಳ ಉಪಯೋಗ ಸಿಗುವಂತೆ ಮಾಡುವಲ್ಲಿ ಸರಕಾರ ಕಟಿಬದ್ಧವಾಗಿದೆ. ಇತ್ತೀಚೆಗೆ ತ್ರಿವಳಿ ತಲಾಖ್ ಬಗ್ಗೆ ರೂಪಿಸಿರುವ ಕಾನೂನು ಇದಕ್ಕೆ ಸೂಕ್ತ ಉದಾಹರಣೆ ಎಂದರು. ಸದ್ಯದಲ್ಲೇ ಈ ಕಾನೂನಿಗೆ ರಾಜ್ಯಸಭೆಯ ಒಪ್ಪಿಗೆ ಸಿಗುವ ಆಶಯವಿದೆ ಎಂದು ಅವರು ತಿಳಿಸಿದರು. ಇದೇ ವೇಳೆ, ಆಯುಷ್ಮಾನ್ ಭಾರತ ವಿಮಾ ಯೋಜನೆಯು ಜಾರಿಗೆ ಬಂದ ಎರಡೂವರೆ ವಾರಗಳಲ್ಲಿ ಸುಮಾರು 50 ಸಾವಿರ ಜನರು ಈ ಯೋಜನೆಯ ಉಪಯೋಗ ಪಡೆದಿದ್ದಾರೆಂದು ಪ್ರಧಾನಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.