ಪಿಎಫ್ಐ ಫಂಡಿಂಗ್ ಗೆ ಎನ್‌ಐಎ ಬ್ರೇಕ್: 5ನೇ ಆರೋಪಪಟ್ಟಿಯಲ್ಲಿ ಉಲ್ಲೇಖ
ನಿಷೇಧಿತ ಸಂಘಟನೆಯ 77 ಬ್ಯಾಂಕ್ ಖಾತೆಗಳ ಸ್ತಂಭನ
Team Udayavani, Mar 19, 2023, 7:00 AM IST
ನವದೆಹಲಿ:ಭಾರತವನ್ನು ಅಸ್ಥಿರಗೊಳಿಸಲು ಕ್ರಿಮಿನಲ್ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) 5ನೇ ಆರೋಪಪಟ್ಟಿ ಸಲ್ಲಿಸಿದೆ.
ನಿಷೇಧಿತ ಸಂಘಟನೆಯ ಹಣಕಾಸು ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳಲ್ಲಿದ್ದ ಪಿಎಫ್ಐನ 37 ಬ್ಯಾಂಕ್ ಖಾತೆಗಳು ಹಾಗೂ ಅದರ 19 ನಾಯಕರಿಗೆ ಸೇರಿರುವ 40 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.
ದೇಶ ವಿಭಜನೆ ಸಂಚು:
ಪಿಎಫ್ಐನ 12 ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಒಟ್ಟು 19 ಮಂದಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಕೋಮು ಲೆಕ್ಕಾಚಾರದಲ್ಲಿ ದೇಶವನ್ನು ಇಬ್ಭಾಗಿಸುವುದೇ ಪಿಎಫ್ಐ ಉದ್ದೇಶವಾಗಿತ್ತು ಎಂದು ಎನ್‌ಐಎ ತಿಳಿಸಿದೆ. ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಆಡಳಿತ ಮಾದರಿಯನ್ನು ಕಿತ್ತುಹಾಕಿ, ಶರಿಯಾ ಕಾನೂನಿನೊಂದಿಗೆ ಇಸ್ಲಾಮಿಕ್ ಕ್ಯಾಲಿಫೇಟ್ ಸ್ಥಾಪಿಸುವುದೇ ಇವರ ಕಟ್ಟಕಡೆಯ ಗುರಿಯಾಗಿತ್ತು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ವೇತನ ರೂಪದಲ್ಲಿ ಹಣ:
ನಿಷೇಧಿತ ಸಂಘಟನೆಯು ದೇಶಾದ್ಯಂತ ಇರುವ ತನ್ನ ಉಗ್ರ ಸದಸ್ಯರಿಗೆ ಮತ್ತು ಶಸ್ತ್ರಾಸ್ತ್ರ ತರಬೇತಿ ನೀಡುವವರಿಗೆ “ವೇತನದ ರೂಪ’ದಲ್ಲಿ ಹಣಕಾಸು ಸಂದಾಯ ಮಾಡುತ್ತಿತ್ತು. ಪಿಎಫ್ಐ ಸದಸ್ಯತ್ವ ಪಡೆದವರಿಗೆ ಗೌಪ್ಯ ಮತ್ತು ವಿಧೇಯತೆಯ ಪ್ರಮಾಣ ಮಾಡಿಸಿಕೊಂಡು, ಅವರನ್ನು ಭಾರತ ಸರ್ಕಾರದ ವಿರುದ್ಧ ಸಶಸ್ತ್ರ ಹೋರಾಟಕ್ಕೆ ಅಣಿಗೊಳಿಸುವ ವ್ಯವಸ್ಥಿತ ಕಾರ್ಯತಂತ್ರವನ್ನು ಸಂಘಟನೆ ರೂಪಿಸಿತ್ತು. ಅತ್ಯುತ್ತಮ ತರಬೇತಿ ಪಡೆದ ಪಿಎಫ್ಐ ಆರ್ಮಿ ರೂಪಿಸುವ ಉದ್ದೇಶದಿಂದ ದೇಶದಾದ್ಯಂತ ಅತಿ ಹೆಚ್ಚು ಪ್ರಭಾವಕ್ಕೊಳಗಾದ ಯುವಕರಿಗೆ ಶಸ್ತ್ರಾಸ್ತ್ರಗಳ ಬಳಕೆ ಬಗ್ಗೆ ತರಬೇತಿ ನೀಡಲಾಗುತ್ತಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದೂ ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.
ಬ್ಯಾಂಕ್ ಖಾತೆ ಸ್ತಂಭನ:
ಬೆಂಗಳೂರು, ಚೆನ್ನೈ, ಕಲ್ಲಿಕೋಟೆ, ಹೈದರಾಬಾದ್ ಸೇರಿದಂತೆ 10 ರಾಜ್ಯಗಳಲ್ಲಿ ಪಿಎಫ್ಐ ಹೊಂದಿದ್ದ 37 ಬ್ಯಾಂಕ್ ಖಾತೆಗಳು ಮತ್ತು ಅದರ 19 ಸದಸ್ಯರು ಹೊಂದಿದ್ದ 40 ಬ್ಯಾಂಕ್ ಖಾತೆಗಳನ್ನು ಸ್ತಂಭನಗೊಳಿಸಲಾಗಿದೆ. ಈ ಮೂಲಕ ಪಿಎಫ್ಐನ ಹಣಕಾಸು ವಹಿವಾಟಿಗೆ ಮೂಗುದಾರ ಹಾಕಲಾಗಿದೆ ಎಂದೂ ಎನ್‌ಐಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.