NIA ಭಾರೀ ಕಾರ್ಯಾಚರಣೆ; ISIS”ಬಳ್ಳಾರಿ ಮಾಡ್ಯೂಲ್”ಯೋಜನೆ ವಿಫಲ:8 ಏಜೆಂಟ್‌ಗಳು ಅರೆಸ್ಟ್
ಬೆಂಗಳೂರು, ಬಳ್ಳಾರಿ ಸೇರಿ 4 ರಾಜ್ಯಗಳಾದ್ಯಂತ ಏಕಕಾಲದಲ್ಲಿ ದಾಳಿ...
Team Udayavani, Dec 18, 2023, 6:24 PM IST
ಹೊಸದಿಲ್ಲಿ: ಐಸಿಸ್ ವಿರುದ್ಧ ಸೋಮವಾರ (ಡಿ.18) ಬೆಳಗ್ಗೆ ಕಾರ್ಯಾಚರಣೆಗಿಳಿದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ನಾಲ್ಕು ರಾಜ್ಯಗಳ 19 ಸ್ಥಳಗಳಲ್ಲಿ ದಾಳಿ ನಡೆಸಿ ನಿಷೇಧಿತ ಉಗ್ರ ಸಂಘಟನೆಯ ಬಳ್ಳಾರಿ ಘಟಕದ ಎಂಟು ಏಜೆಂಟ್‌ಗಳನ್ನು ಬಂಧಿಸಿದೆ. ಉಗ್ರ ತಂಡದ ನಾಯಕ ಮಿನಾಜ್ ಸೇರಿ ಇತರ ಆರೋಪಿಗಳ ಭಯೋತ್ಪಾದಕ ಕೃತ್ಯಗಳನ್ನೆಸಗುವ, ವಿಶೇಷವಾಗಿ IED ಸ್ಫೋಟಗಳನ್ನು ನಡೆಸುವ ಯೋಜನೆಗಳನ್ನು ವಿಫಲಗೊಳಿಸಿದೆ.
ಬಂಧಿತರು ಕರ್ನಾಟಕದ ಬಳ್ಳಾರಿಯ ಮಿನಾಜ್ ಅಲಿಯಾಸ್ ಮೊಹಮದ್ ಸುಲೇಮಾನ್, ಸೈಯದ್ ಸಮೀರ್ , ಬೆಂಗಳೂರಿನ ಮೊಹಮದ್ ಮುಜಮ್ಮಿಲ್, ದೆಹಲಿಯ ಶಯಾನ್ ರಹಮಾನ್, ಮುಂಬೈನಿಂದ ಅನಾಸ್ ಇಕ್ಬಾಲ್ ಶೇಖ್, ಮೊಹಮ್ಮದ್ ಮುನಿರುದ್ದೀನ್, ಸೈಯದ್ ಸಮೀವುಲ್ಲಾ ಅಲಿಯಾಸ್ ಸಮಿ, ಜಮ್ಶೆಡ್‌ಪುರದ ಎಂಡಿ ಶಹಬಾಜ್ ಅಲಿಯಾಸ್ ಜುಲ್ಫಿಕರ್(ಗುಡ್ಡು) ಎಂಬವರನ್ನು ಬಂಧಿಸಲಾಗಿದೆ.
NIA ತಂಡಗಳು ಬಳ್ಳಾರಿ, ಬೆಂಗಳೂರು, ಮಹಾರಾಷ್ಟ್ರದ ಅಮರಾವತಿ, ಮುಂಬೈ ಮತ್ತು ಪುಣೆ, ಜಾರ್ಖಂಡ್‌ನ ಜಮ್ಶೆಡ್‌ಪುರ ಮತ್ತು ಬೊಕಾರೊ, ದೆಹಲಿಯಾದ್ಯಂತ ಹರಡಿಕೊಂಡಿದ್ದ 19 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದವು.
ಎಂಟು ಐಸಿಸ್ ಏಜೆಂಟ್‌ಗಳು ಉಗ್ರ ಸಂಬಂಧಿತ ಕೃತ್ಯಗಳು ಮತ್ತು ನಿಷೇಧಿತ ಸಂಘಟನೆಯಾದ ಐಸಿಸ್‌ನ ಚಟುವಟಿಕೆಗಳನ್ನು ಸಕ್ರಿಯವಾಗಿ ಉತ್ತೇಜಿಸುವಲ್ಲಿ ಮಿನಾಜ್ ನೇತೃತ್ವದಲ್ಲಿ ತೊಡಗಿಸಿಕೊಂಡಿದ್ದರು.
ದಾಳಿ ವೇಳೆ ಸ್ಫೋಟಕ ಕಚ್ಚಾ ಸಾಮಗ್ರಿಗಳಾದ ಸಲ್ಫರ್, ಪೊಟ್ಯಾಸಿಯಮ್ ನೈಟ್ರೇಟ್, ಇದ್ದಿಲು, ಗನ್ ಪೌಡರ್, ಎಥೆನಾಲ್, ಹರಿತವಾದ ಆಯುಧಗಳು, ಲೆಕ್ಕವಿಲ್ಲದ ನಗದು ಮತ್ತು ದೋಷಾರೋಪಣೆಯ ದಾಖಲೆಗಳು, ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರಂಭಿಕ ತನಿಖೆಯ ಪ್ರಕಾರ, ಆರೋಪಿಗಳು ಸ್ಫೋಟಕ ಕಚ್ಚಾ ವಸ್ತುಗಳನ್ನು ಐಇಡಿ ತಯಾರಿಸಿ ಅದನ್ನು ಸ್ಫೋಟ ನಡೆಸಲು ಸಂಚು ಹೂಡಿದ್ದರು. ಹಿಂಸಾತ್ಮಕ ಜಿಹಾದ್, ಖಿಲಾಫತ್, ಐಸಿಸ್ ಇತ್ಯಾದಿಗಳ ಮಾರ್ಗವನ್ನು ಅನುಸರಿಸಿ ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳ ಮೂಲಕ ನಿರಂತರವಾಗಿ ಪರಸ್ಪರ ಸಂಪರ್ಕದಲ್ಲಿದ್ದರು ಎಂದು ತನಿಖೆಯಿಂದ ಬಹಿರಂಗವಾಗಿವೆ. ನಿರ್ದಿಷ್ಟವಾಗಿ ನೇಮಕಾತಿ ಉದ್ದೇಶಗಳಿಗಾಗಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಹಾದ್ ಉದ್ದೇಶಕ್ಕಾಗಿ ಮುಜಾಹಿದೀನ್‌ಗಳ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಪ್ರಸಾರ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.