ತಮಿಳುನಾಡು : ಐದು ಕಡೆ ಎನ್‌ಐಎ ದಾಳಿ
Team Udayavani, Aug 29, 2019, 8:56 AM IST
ತಮಿಳುನಾಡು: ರಾಷ್ಟ್ರೀಯ ತನಿಖಾ ದಳವು ತಮಿಳುನಾಡಿನ ಕೊಯಮತ್ತೂರಿನ
ಐದು ಕಡೆ ದಿಢೀರ್ ದಾಳಿ ನಡೆಸಿ ಸಂಶಯಾಸ್ಪದ ವ್ಯಕ್ತಿಗಳಿಂದ ಲ್ಯಾಪ್ ಟಾಪ್, ಮೊಬೈಲ್, ಪೆನ್ ಡ್ರೈವ್ ಮತ್ತಿತರ ವಿದ್ಯುನ್ಮಾನ ಪರಿಕರಗಳನ್ನು ವಶಪಡಿಸಿಕೊಂಡಿದೆ.
ಸದ್ಯಕ್ಕೆ ಮಾಧ್ಯಮಗಳಿಗೆ ಲಭಿಸಿರುವ ಮಾಹಿತಿಯಂತೆ, ಈ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ. ತಮಿಳುನಾಡಿನ ಪೊಲೀಸರೊಂದಿಗೆ ಈ ಕಾರ್ಯಾಚರಣೆ ನಡೆಸಲಾಗಿದೆ ಪ್ರಕರಣದ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
ಎರಡು ದಿನಗಳ ಹಿಂದಷ್ಟೇ ಶ್ರೀಲಂಕಾ ಕಡೆಯಿಂದಲೂ ಲಷ್ಕರ್ ತೊಯ್ಬಾ ಉಗ್ರರು ನುಸುಳಿರುವ ಸಾಧ್ಯತೆ ಇದೆ ಎಂದು ಕೇಂದ್ರ ಸರಕಾರ ಎಲ್ಲ ರಾಜ್ಯ ಸರಕಾರಗಳಿಗೂ ನಗರಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕಾರವಾರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಎಲ್ಲೆಡೆ ಕರಾವಳಿಯಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು
ಐಎಸ್ಐ ಪ್ರಭಾವ
ಐಎಸ್ಐ ನ ಪ್ರಭಾವಕ್ಕೆ ಒಳಗಾದವರು ದೇಶದ ವಿವಿಧೆಡೆ ಕಾರ್ಯನಿರತರಾಗಿದ್ದಾರೆ ಎಂಬ ಮಾಹಿತಿ ಹಿಂದೆಯೂ ಲಭ್ಯವಾಗಿತ್ತು. ಕಾಸರಗೋಡಿನಿಂದಲೂ ಹಲವರು ಐಎಸ್ಐ ಗೆ ಸೇರಿದ್ದಾರೆಂಬ ಅಭಿಪ್ರಾಯವೂ ಪ್ರಕಟವಾಗಿದ್ದನ್ನು ಸ್ಮರಿಸಬಹುದು.
ಈ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.