NIA Raids: ಅಲ್‌ಖೈದಾ ಸಂಚು ಕೇಸ್‌: ರಾಜ್ಯದಲ್ಲಿ ಎನ್‌ಐಎ ದಾಳಿ

ಅಸ್ಥಿರತೆ ಸೃಷ್ಟಿಗೆ ಬಾಂಗ್ಲಾ ಪ್ರಜೆಗಳಿಂದ ಸಂಚು ಆರೋಪ

Team Udayavani, Nov 12, 2024, 7:29 AM IST

NIA Raids: ಅಲ್‌ಖೈದಾ ಸಂಚು ಕೇಸ್‌: ರಾಜ್ಯದಲ್ಲಿ ಎನ್‌ಐಎ ದಾಳಿ

ಹೊಸದಿಲ್ಲಿ: ಭಾರತವನ್ನು ಅಸ್ಥಿರಗೊಳಿಸುವ ಅಲ್‌ಕಾಯಿದಾ ಉಗ್ರ ಸಂಘಟನೆಯ ಸಂಚಿನ ಭಾಗವಾಗಿ ಕೆಲವು ಬಾಂಗ್ಲಾದೇಶಿ ಪ್ರಜೆಗಳು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ದೇಶಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದೆ. ಕರ್ನಾಟಕ ಸಹಿತ 6 ರಾಜ್ಯಗಳ 9 ಪ್ರದೇಶಗಳಲ್ಲಿ ಈ ದಾಳಿ ನಡೆದಿದೆ.

ಭಾರತದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುವುದಕ್ಕಾಗಿ ಮತ್ತು ಉಗ್ರ ಸಂಘಟನೆಗೆ ಯುವಕರನ್ನು ಸೇರ್ಪಡೆ ಮಾಡುವುದಕ್ಕಾಗಿ ಅಲ್‌ಕಾಯಿದಾ ಸಂಚು ರೂಪಿಸಿತ್ತು. ಈ ಸಂಚಿಗೆ ಸಂಬಂಧಿಸಿ ಕಳೆದ ವರ್ಷ ಪ್ರಕರಣ ದಾಖಲಿಸಿದ್ದ ಎನ್‌ಐಎ ನಿರಂತರವಾಗಿ ತನಿಖೆ ನಡೆಸುತ್ತಿದೆ. ಇದರ ಭಾಗವಾಗಿ ಸೋಮವಾರ ಕರ್ನಾಟಕ, ಜಮ್ಮು- ಕಾಶ್ಮೀರ, ಬಿಹಾರ, ಪಶ್ಚಿಮ ಬಂಗಾಲ, ತ್ರಿಪುರಾ ಮತ್ತು ಅಸ್ಸಾಂಗಳಲ್ಲಿ ದಾಳಿ ನಡೆದಿದೆ.

ಹಲವು ದಾಖಲೆ ವಶ
ದಾಳಿಯ ಸಮಯದಲ್ಲಿ ಬ್ಯಾಂಕ್‌ ವ್ಯವಹಾರಗಳ ಮಾಹಿತಿಯನ್ನು ಹೊಂದಿರುವ ದಾಖಲೆಗಳು, ಮೊಬೈಲ್‌ ಫೋನ್‌ಗಳು ಮತ್ತು ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವೆಲ್ಲವೂ ಉಗ್ರ ಚಟುವಟಿಕೆಗೆ ಬಳಕೆಯಾಗುತ್ತಿದ್ದರ ಬಗ್ಗೆ ಮಾಹಿತಿಯನ್ನು ಒಳಗೊಂಡಿವೆ ಎಂದು ಎನ್‌ಐಎ ಪ್ರಕಟನೆ ತಿಳಿಸಿದೆ.

ಎನ್‌ಐಎ ತನಿಖೆಯ ಪ್ರಕಾರ ದಾಳಿಗೊಳಗಾದ ಪ್ರದೇಶದಲ್ಲಿದ್ದ ವ್ಯಕ್ತಿಗಳು ಬಾಂಗ್ಲಾದೇಶದ ಪ್ರಜೆಗಳೊಂದಿಗೆ ಸಂಪರ್ಕ ಹೊಂದಿದ್ದರು. ಅಲ್ಲದೆ ಅಲ್‌ಕಾಯಿದಾ ಬಗ್ಗೆ ಸಹಾನುಭೂತಿ ಹೊಂದಿದ್ದರು. ಹೀಗಾಗಿ ಈ ಪ್ರದೇಶಗಳ ಮೇಲೆ ದಾಳಿ ಮಾಡಿ ಸಂಚಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತನಿಖೆ ಮುಂದುವರಿಸಲಾಗುತ್ತದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ನಿರಂತರ ತನಿಖೆ
ಬಾಂಗ್ಲಾದೇಶ ಮೂಲದ ಅಲ್‌ಕಾಯಿದಾ ಕಾರ್ಯಕರ್ತರು ನಡೆಸಿದ ಪಿತೂರಿಗೆ ಸಂಬಂಧಿಸಿ 2023ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಎನ್‌ಐಎ ನಿರಂತರವಾಗಿ ಈ ಬಗ್ಗೆ ತನಿಖೆ ನಡೆಸುತ್ತಿದೆ. ಭಯೋತ್ಪಾದಕ ಚಟುವಟಿಕೆಯ ಪ್ರಚಾರ, ಉಗ್ರ ಸಂಘಟನೆಗಳಿಗೆ ಜನರನ್ನು ಸೆಳೆಯುವುದು ಮುಂತಾದ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪವನ್ನು ಈ ಸಂಘಟನೆಯ ಮೇಲೆ ಎನ್‌ಐಎ ಮಾಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳ ಸಹಿತ ಐವರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಇವರೆಲ್ಲರೂ ದುರ್ಬಲ ಮುಸ್ಲಿಂ ಯುವಕರ ಮನಸ್ಸನ್ನು ಬದಲಾಯಿಸಿ ಉಗ್ರ ಸಂಘಟನೆಯತ್ತ ಸೆಳೆಯುತ್ತಿದ್ದ ಹಾಗೂ ಉಗ್ರ ಸಂಘಟನೆಗೆ ಹಣಕಾಸಿನ ನೆರವನ್ನು ಒದಗಿಸುತ್ತಿರುವ ಆರೋಪವನ್ನು ಹೊತ್ತಿದ್ದಾರೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.