ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು
Team Udayavani, May 14, 2021, 8:27 AM IST
ಪಣಜಿ: ಗೋವಾದಲ್ಲಿ ಕೋವಿಡ್ ರಣಕೇಕೆ ಹಾಕುತ್ತಿದೆ. ಕಳೆದ 2 ದಿನಗಳ ಹಿಂದೆ ಆಕ್ಸಿಜನ್ ಕೊತೆಯಿಂದ ಬರೋಬ್ಬರಿ 26 ಮಂದಿ ಸಾವನ್ನಪ್ಪಿದ್ದರು. ಇದರ ನೆನಪು ಮಾಸುವ ಮುನ್ನವೇ ಗೋವಾ ಖಾಸಗಿ ಆಸ್ಪತ್ರೆಯಲ್ಲಿ ಮತ್ತೆ 15 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ.
ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 15 ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 2 ದಿನಗಳ ಹಿಂದೆ ಇದೇ ಗೋವಾ ವೈದ್ಯಕೀಯ ಕಾಲೇಜ್ನಲ್ಲಿ 26 ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು.
ಗೋವದಲ್ಲಿ ಆಕ್ಸಿಜನ್ ಕೊರತೆಯಿಂದ ಸಾಯುವವರ ಸಂಖ್ಯೆ ಜಾಸ್ತಿಯಾಗಿದೆ. ಗೋವಾ ಸರ್ಕಾರಕ್ಕೆ ಇದೀಗ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಮತ್ತೆ ಈ ರೀತಿಯ ದುರಂತ ಜರುಗದಂತೆ ಕ್ರಮ ವಹಿಸಬೇಕು ಎಂದಿದೆ.
ಮೃತರ ಸಂಬಂಧಿಕರು ಇದೀಗ ಆಸ್ಪತ್ರೆ ಮೇಲೆ ಆರೋಪ ಮಾಡುತ್ತಿದ್ದು, ಆಕ್ಸಿಜನ್ ಸರಿಯಾದ ಸರಬರಾಜು ಮಾಡದ ಕಾರಣದಿಂದಲೇ ಪ್ರಕರಣ ಜರುಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.