![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 19, 2023, 3:03 PM IST
ಮುಂಬಯಿ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ಒಂದು ವ್ಯಾನ್‌ಗೆ ಢಿಕ್ಕಿ ಹೊಡೆದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ ರಾಯಗಢದ ರೆಪೋಲಿ ಗ್ರಾಮದಲ್ಲಿ ಮುಂಜಾನೆ 4.45ಕ್ಕೆ ಅಪಘಾತ ಸಂಭವಿಸಿದ್ದು, ದುರ್ದೈವಿಗಳು ಎಲ್ಲಾ ಸಂಬಂಧಿಕರಾಗಿದ್ದು ವ್ಯಾನ್‌ನಲ್ಲಿ ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ಹೋಗುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.
ಟ್ರಕ್ ಮುಂಬೈ ಕಡೆಗೆ ಹೋಗುತ್ತಿತ್ತು. ಒಂಬತ್ತು ಜನರು ಮೃತಪಟ್ಟಿದ್ದು, . ಮೃತರಲ್ಲಿ ಒಂದು ಹೆಣ್ಣು ಮಗು, ಮೂವರು ಮಹಿಳೆಯರು ಮತ್ತು ಐವರು ಪುರುಷರು ಸೇರಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ಕು ವರ್ಷದ ಬಾಲಕಿಯನ್ನು ಮಂಗಾಂವ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.