ನಿರ್ಭಯಾ ಕೇಸ್; ವೈದ್ಯಕೀಯ ಚಿಕಿತ್ಸೆ ಕೋರಿ ಸಲ್ಲಿಸಿದ್ದ ದೋಷಿ ಶರ್ಮಾ ಅರ್ಜಿ ವಜಾ
ಅಪರಾಧಿ ವಿನಯ್ ಶರ್ಮಾ ಮಾನಸಿಕವಾಗಿ ಸದೃಢನಾಗಿದ್ದು, ಯಾವುದೇ ಆರೋಗ್ಯ ಸಮಸ್ಯೆ ಇಲ್ಲ
Team Udayavani, Feb 22, 2020, 5:54 PM IST
ನವದೆಹಲಿ: ನಿರ್ಭಯಾ ಪ್ರಕರಣದಲ್ಲಿ ದೋಷಿಯಾಗಿರುವ ವಿನಯ್ ಶರ್ಮಾ ಉತ್ತಮ ವೈದ್ಯಕೀಯ ಚಿಕಿತ್ಸೆಗೆ ಅನುಮತಿ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಪಟಿಯಾಲಾ ಹೌಸ್ ಕೋರ್ಟ್ ಶನಿವಾರ ವಜಾಗೊಳಿಸಿದೆ.
ತನಗೆ ಮಾನಸಿಕ ಅಸ್ವಸ್ಥತೆ, ವಿಚಿತ್ರ ವರ್ತನೆ, ತಲೆ ಮತ್ತು ತೋಳು ಗಾಯವಾಗಿದ್ದು ಇದಕ್ಕೆ ಉತ್ತಮ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕೆಂದು ಕೋರಿ ಶರ್ಮಾ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಅಪರಾಧಿ ವಿನಯ್ ಶರ್ಮಾ ಮಾನಸಿಕವಾಗಿ ಸದೃಢನಾಗಿದ್ದು, ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಹಾರ್ ಜೈಲು ಅಧಿಕಾರಿಗಳು ವರದಿ ಸಲ್ಲಿಸಿದ್ದು, ಶರ್ಮಾನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಎಲ್ಲಾ ನಾಲ್ವರು ದೋಷಿಗಳಿಗೆ ಸೂಕ್ತ ವೈದ್ಯಕೀಯ ನೆರವು ಒದಗಿಸಿಕೊಡಬೇಕೆಂದು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಜೈಲು ಅಧಿಕಾರಿಗಳು ನೀಡಿರುವ ವರದಿ ಆಧಾರದ ಮೇಲೆ ವಿನಯ್ ಶರ್ಮಾನ ಮಾನಸಿಕ ಸ್ಥಿತಿ ಉತ್ತಮವಾಗಿದೆ. ಈ ಹಿನ್ನೆಲೆಯಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಮೆಡಿಕಲ್ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.