Kolkata ಪ್ರಕರಣ; ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದ ನಿರ್ಭಯಾ ತಾಯಿ
ಕ್ರಮ ಕೈಗೊಳ್ಳುವ ಬದಲು ಪ್ರತಿಭಟನೆ ನಡೆಸುತ್ತಿದ್ದಾರೆ...
Team Udayavani, Aug 17, 2024, 6:45 PM IST
ಹೊಸದಿಲ್ಲಿ: ಕೋಲ್ಕತಾ ಟ್ರೈನಿ ವೈದ್ಯೆ ಅ*ತ್ಯಾಚಾರ ಮತ್ತು ಹ*ತ್ಯೆಯನ್ನು ತೀವ್ರವಾಗಿ ಖಂಡಿಸಿರುವ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಲಿಪಶು ನಿರ್ಭಯಾಳ ತಾಯಿ ಆಶಾದೇವಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.
‘ಸಿಎಂ ಮಮತಾ ಬ್ಯಾನರ್ಜಿ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾಗಿದ್ದಾರೆ. ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಆಶಾದೇವಿ ಪಿಟಿಐಗೆ ಹೇಳಿಕೆ ನೀಡಿ ಆಕ್ರೋಶ ಹೊರ ಹಾಕಿದ್ದಾರೆ.
ಆಗಸ್ಟ್ 9 ರಂದು ಕೋಲ್ಕತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶವವಾಗಿ ಪತ್ತೆಯಾದ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅ*ತ್ಯಾಚಾರ ಎಸಗಿ ಕೊ*ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ವೈದ್ಯರು ನ್ಯಾಯಕ್ಕಾಗಿ ದೇಶದ ವ್ಯಾಪಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಯಕ್ಕಾಗಿ ಆಗ್ರಹಿಸಿ ಶುಕ್ರವಾರ ಕೋಲ್ಕತಾದ ಮೌಲಾಲಿಯಿಂದ ಡೊರಿನಾ ಕ್ರಾಸಿಂಗ್‌ವರೆಗೆ ಮಮತಾ ಬ್ಯಾನರ್ಜಿ ಪ್ರತಿಭಟನಾ ರ‍್ಯಾಲಿ ನಡೆಸಿ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಬಿಜೆಪಿ ಸೇರಿ ಹಲವು ಪಕ್ಷಗಳು ತೀವ್ರ ಲೇವಡಿ ಮಾಡಿದ್ದು, ನ್ಯಾಯ ಕೊಡಿಸಬೇಕಾದವರೇ ಪ್ರತಿಭಟನೆ ನಡೆಸಿದರೆ ಹೇಗೆ ಎಂದು ಪ್ರಶ್ನಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.