ನಿತೀಶ್ ಅವರೇ ಸಿಎಂ; ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಬನ್ಸಾಲ್ ಸ್ಪಷ್ಟನೆ
Team Udayavani, Nov 12, 2020, 6:13 AM IST
ಪಟ್ನಾ /ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಕೂಟದೊಳಗೆ ಬಿಜೆಪಿಯೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಈಗಾಗಲೇ ಮಾತು ಕೊಟ್ಟಿರುವಂತೆ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಬನ್ಸಾಲ್ ಸ್ಪಷ್ಟವಾಗಿ ಹೇಳಿದ್ದಾರೆ.
ಮಂಗಳವಾರವಷ್ಟೇ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 74, ಜೆಡಿಯು 43, ವಿಕಾಸ್‌ಶೀಲ ಇನ್ಸಾನ್ ಪಾರ್ಟಿ 4 ಮತ್ತು ಹಿಂದೂಸ್ಥಾನಿ ಅವಾಮ್ ಮೋರ್ಚಾ 4 ಸ್ಥಾನಗಳಲ್ಲಿ ಜಯ ಗಳಿಸಿವೆ. ಲೆಕ್ಕಾಚಾರದಲ್ಲಿ ಬಿಜೆಪಿಯೇ ದೊಡ್ಡ ಪಕ್ಷ. ಆದರೆ ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರೇ ಸಿಎಂ ಅಭ್ಯರ್ಥಿ ಎಂದು ಹೇಳಿರುವುದರಿಂದ ಅವರೇ 4ನೇ ಬಾರಿಗೆ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ಬಿಜೆಪಿಯ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಏರ್ಪಡಿಸಲಾಗಿದ್ದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಿತೀಶ್ ಅವರ ಅಭಿವೃದ್ಧಿ ಕೇಂದ್ರಿತ ಆಡಳಿತದಿಂದಾಗಿ ಬಿಹಾರದಲ್ಲಿ ಗೆದ್ದಿದ್ದೇವೆ ಎಂದು ಘೋಷಿಸಿದ್ದಾರೆ. ಈ ಮೂಲಕ ನಿತೀಶ್ ಅವರದೇ ನೇತೃತ್ವ ಎಂದು ಪರೋಕ್ಷವಾಗಿ ಹೇಳಿದರು.
ನಾವು ಸಮಾನರು
ನಾವು ಮತ್ತು ಅಂಗಪಕ್ಷಗಳು ಸಮಾನರಾಗಿದ್ದೇವೆ. ನಮ್ಮ ನಡುವೆ ಯಾವುದೇ ಗೊಂದಲವಿಲ್ಲ’ ಎಂದೂ ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಬನ್ಸಾಲ್ ಹೇಳಿದರು.
“ಮೌನ ಮತದಾರ’ರಿಗೆ ಧನ್ಯವಾದ
ದಿಲ್ಲಿಯಲ್ಲಿ ಮಾತನಾಡಿದ ಮೋದಿ, ಬಿಹಾರದಲ್ಲಿ ಎನ್‌ಡಿಎ ಗೆಲುವಿಗೆ ಕಾರಣರಾದ “ಮೌನ ಮತದಾರ’ರಿಗೆ ಧನ್ಯವಾದ ಹೇಳಿದ್ದಾರೆ. “ಎನ್‌ಡಿಎಗೆ ಸೈಲೆಂಟ್ ವೋಟರ್ಸ್ ಬೆಂಬಲ ನೀಡಿದ್ದರಿಂದಲೇ ಗೆಲುವು ಸಾಧ್ಯವಾಯಿತು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಸೈಲೆಂಟ್ ವೋಟರ್ಸ್ ಎಂದರೆ ಮಹಿಳಾ ಮತದಾರರು. ನಾವು ಮಾಡಿದ ಉತ್ತಮ ಕೆಲಸವನ್ನು ಅವರು ಬೆಂಬಲಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಕೊರೊನಾ ನಿರ್ವಹಣೆಗೆ ಸಿಕ್ಕ ಜಯ
ಉತ್ತಮವಾಗಿ ಕೊರೊನಾ ನಿರ್ವಹಣೆ ಮಾಡಿದ್ದರಿಂದಲೇ ಬಿಹಾರ ವಿಧಾನಸಭೆಯ ಚುನಾವಣೆಯಲ್ಲಿ ಯಶಸ್ಸು ಸಿಕ್ಕಿದೆ ಎಂದೂ ಪ್ರಧಾನಿ ಮೋದಿ ಹೇಳಿದರು. ಕೊರೊನಾವನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ಪ್ರತಿಯೊಬ್ಬರದ್ದೂ ಯಶಸ್ಸಿನ ಕಥೆಯೇ ಆಗಿದೆ ಎಂದರು.
ನಿನ್ನೆ ಏನಾಯಿತು?
1ಮಂಗಳವಾರ ಮಧ್ಯರಾತ್ರಿ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟ
2ನಿತೀಶ್‌ರನ್ನು ಬೆಂಬಲಿಸುವುದಿಲ್ಲ ಎಂದ ಚಿರಾಗ್ ಪಾಸ್ವಾನ್
3ಜನರೇ ಸುಪ್ರೀಂ, ಎನ್‌ಡಿಎ ಬೆಂಬಲಿಸಿದ ಜನರಿಗೆ ಧನ್ಯವಾದಗಳು ಮತ್ತು ಪ್ರಧಾನಿ ಮೋದಿ ಅವರಿಗೂ ಧನ್ಯವಾದಗಳು ಎಂದ ನಿತೀಶ್‌ಕುಮಾರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.