ಮುಖ್ಯಮಂತ್ರಿಸ್ಥಾನಕ್ಕೆ ನಿತೀಶ್ ರಾಜೀನಾಮೆ:ಮುರಿದುಬಿತ್ತು ಮಹಾಮೈತ್ರಿ
Team Udayavani, Jul 26, 2017, 7:09 PM IST
ಪಾಟ್ನಾ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬುಧವಾರದಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಮೂಲಕ ಕಳೆದ 20 ತಿಂಗಳುಗಳ ಹಿಂದೆ ಬಿಹಾರದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಜೆಡಿಯು-ಆರ್.ಜೆ.ಡಿ. -ಕಾಂಗ್ರೆಸ್ ಮಹಾಮೈತ್ರಿಕೂಟ ಬಿರುಕು ಬಿಟ್ಟಿದೆ.
ಬಿಹಾರ ಉಪಮುಖ್ಯಮಂತ್ರಿ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ವಿರುದ್ಧದ ಭೂ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇತ್ತೀಚೆಗಷ್ಟೆ ಅವರ ಮೇಲೆ ಎಫ್.ಐ.ಆರ್. ದಾಖಲಿಸಿತ್ತು. ಆವತ್ತಿನಿಂದ ನಿತೀಶ್ ಕುಮಾರ್ ಅವರು ತೇಜಸ್ವಿ ರಾಜೀನಾಮೆಗೆ ಪಟ್ಟು ಹಿಡಿದು ಕೂತಿದ್ದರು.
ಆದರೆ ಆರ್.ಜೆ.ಡಿ. ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ನಿತೀಶ್ ಬೇಡಿಕೆಗೆ ಸೊಪ್ಪು ಹಾಕಿರಲಿಲ್ಲ. ಮತ್ತು ಈ ಕುರಿತಾಗಿ ಬುಧವಾರ ಬೆಳಗ್ಗೆಯಷ್ಟೆ ಲಾಲೂ ಅವರು ತಮ್ಮ ಪುತ್ರ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು.
ಈ ಎಲ್ಲಾ ಬೆಳವಣಿಗೆಗಳ ಬಳಿಕ ಬುಧವಾರ ಸಾಯಂಕಾಲದಂದು ನಿತೀಶ್ ಕುಮಾರ್ ಅವರು ಹಠಾತ್ತಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಬಿಹಾರ ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಇದು ಮಹಾ ಸಂಚಲನಕ್ಕೆ ಕಾರಣವಾಗಿದೆ.
ಈ ಮೈತ್ರಿಕೂಟವನ್ನು ಉಳಿಸಿಕೊಳ್ಳುವಲ್ಲಿ ನಾನು ಕೊನೆಯ ಹಂತದವರೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ, ಆದರೆ ಕೊನೆಯಲ್ಲಿ ನನಗೆ ರಾಜೀನಾಮೆ ನೀಡದೆ ಬೇರೆ ಮಾರ್ಗವೇ ಇರಲಿಲ್ಲ. ಬಿಹಾರದ ಜನತೆಯ ಸೇವೆಗೆ ನಾನು ಈಗಲೂ ಬದ್ಧನಾಗಿದ್ದೇನೆ, ಆದರೆ ಪ್ರಸಕ್ತ ಸನ್ನಿವೇಶದಲ್ಲಿ ನಾನು ಜನರ ಸೇವೆಯನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲವಾಗಿದ್ದರಿಂದ ರಾಜೀನಾಮೆಯನ್ನು ನೀಡುವುದು ಅನಿವಾರ್ಯವಾಯಿತು ಎಂಬುದಾಗಿ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ನಿತೀಶ್ ಪ್ರತಿಕ್ರಿಯೆ ನೀಡಿದ್ದಾರೆ.
Read this in English: Nitish Kumar resigns as Bihar CM: http://bit.ly/2vIiiLp
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.