Bihar ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್; ಆರ್ ಜೆಡಿ ಸಖ್ಯ ಅಂತ್ಯ
Team Udayavani, Jan 28, 2024, 11:13 AM IST
ಪಾಟ್ನಾ: ಕಳೆದೆರಡು ದಿನಗಳಿಂದ ಬಿಹಾರ ರಾಜಕೀಯದಲ್ಲಿ ಬೆಳವಣಿಗೆಯಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಅಧಿಕೃತವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಬಿಹಾರದಲ್ಲಿ ಜೆಡಿಯು- ಆರ್ ಜೆಡಿ ಸಖ್ಯ ಅಧಿಕೃತವಾಗಿ ಮುರಿದು ಬಿದ್ದಿದೆ.
ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಪಾಟ್ನಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ.
ಬಿಹಾರದಲ್ಲಿ ಆರ್ ಜೆಡಿ – ಜೆಡಿಯು ಸರ್ಕಾರ ಪತನವಾಗಿದ್ದು, ನೂತನ ಜೆಡಿಯು- ಬಿಜೆಪಿ ಸರ್ಕಾರ ರಚನೆಯಾಗಲಿದೆ. ಈ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ರವಿವಾರ ಸಂಜೆಯೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಪಣತೊಟ್ಟಂತಿದ್ದ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜತೆ ಮುಂಚೂಣಿಯಲ್ಲಿ ನಿಂತು ಇಂಡಿಯಾ ಮೈತ್ರಿಕೂಟ ರಚನೆಗೆ ಕಾರಣರಾಗಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತ್ತೆ ಬಿಜೆಪಿ ಜತೆಗೆ ನಿತೀಶ್ ಕುಮಾರ್ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.