ಬಿಹಾರ ಸಿಎಂ ಆಗಿ ನಿತೀಶ್ ಪ್ರಮಾಣ ವಚನ; ಸುಶೀಲ್ ಮೋದಿ ಡಿಸಿಎಂ
Team Udayavani, Jul 27, 2017, 10:58 AM IST
ಪಟ್ನಾ : ಬಿಹಾರದ ಮಹಾ ಘಟಬಂಧನ ಸರಕಾರದ ಮುಖ್ಯಮಂತ್ರಿ ಪದಕ್ಕೆ ನಿನ್ನೆ ಹಠಾತ್ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ ಅವರು ಇಂದು ಗುರುವಾರ ಬಿಜೆಪಿ ಬೆಂಬಲದಲ್ಲಿ ಏರ್ಪಟ್ಟ ಹೊಸ ಮೈತ್ರಿ ಕೂಟದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಕೇಸರಿನಾಥ ತ್ರಿಪಾಠಿ ಅವರು ನಿತಿಶ್ ಕುಮಾರ್ ಅವರಿಗೆ ಪಟ್ನಾದ ರಾಜಭವನದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ನಡೆದ ಸರಳ ಸಮಾರಂಭದಲ್ಲಿ ಆರನೇ ಬಾರಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸಿದರು.
ನಿತೀಶ್ ಅವರನ್ನು ಅನುಸರಿಸಿ ಸುಶೀಲ್ ಕುಮಾರ್ ಮೋದಿ ಅವರು ಬಿಹಾರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ಎರಡು ವರ್ಷಗಳಲ್ಲಿ ನಿತೀಶ್ ಕುಮಾರ್ ಅವರ ಎರಡನೇ ಇನ್ನಿಂಗ್ಸ್ ಇದಾಗಿದೆ. ಮಹಾ ಮೈತ್ರಿಕೂಟದ ಭ್ರಷ್ಟ ನಾಯಕರೊಂದಿಗೆ ತನ್ನನ್ನು ಗುರುತಿಸಿಕೊಳ್ಳಲು ತಾನು ಸಿದ್ಧನಿಲ್ಲ; ಅವರೊಂದಿಗೆ ಸರಕಾರದಲ್ಲಿ ಕೂಡಿಕೊಂಡು ಕೆಲಸ ಮಾಡುವುದು ತನಗೆ ಸಾಧ್ಯವಿಲ್ಲ ಎಂಬ ಖಡಕ್ ಸಂದೇಶವನ್ನು ರವಾನಿಸಿ ನಿತೀಶ್ ನಿನ್ನೆ ಹಠಾತ್ ಬೆಳವಣಿಗೆಯಲ್ಲಿ ತಮ್ಮ ಮುಖ್ಯಮಂತ್ರಿ ಪದಕ್ಕೆ ರಾಜೀನಾಮೆ ನೀಡಿದ್ದರು.
ರಾಜಭವನದ ಸುತ್ತ ಮುತ್ತಲ ಪ್ರದೇಶದಲ್ಲಿ ಸೆ.144 ಹೇರಲ್ಪಟ್ಟ ಕಾರಣ ಇಂದು ಬೆಳಗ್ಗೆ ಆರ್‌ಜೆಡಿ ನಡೆಸಲು ಉದ್ದೇಶಿಸಿದ ಪ್ರತಿಭಟನ ಕಾಯರಕ್ರಮವನ್ನು ರದ್ದು ಪಡಿಸಲಾಯಿತು.
ನಿತೀಶ್ ಕುಮಾರ್ ಅವರ ಮಿಂಚಿನ ನಡೆಯಿಂದ ಕ್ರುದ್ಧರಾಗಿರುವ ಆರ್‌ಜೆಡಿ ನಾಯಕ ಜೆ ಪಿ ಯಾದವ್ ಅವರು “ನಾವು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಬಲ ಧ್ವನಿಯಲ್ಲಿ ಎತ್ತುವೆವು. ಇತರ ಪಕ್ಷಗಳೊಂದಿಗೂ ನಾವು ಮಾತುಕತೆ ನಡೆಸಿದ ಸಂಸತ್ತಿನಲ್ಲಿ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವೆವು’ ಎಂದು ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
Social Media A/c: ಮಕ್ಕಳ ಸೋಷಿಯಲ್ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?
Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್ ಶವವಾಗಿ ಪತ್ತೆ!
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.