ಬಿಹಾರ ಸಿಎಂಗೆ ಶಿಕ್ಷಣ ಸಚಿವರ ನೇಮಕ ಇಕ್ಕಟ್ಟು
Team Udayavani, Nov 19, 2020, 12:05 AM IST
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೊಸ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿರುವ ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಅವರನ್ನು ನೇಮಿಸಿರುವುದಕ್ಕೆ ವಿಪಕ್ಷ ಆರ್‌ಜೆಡಿ ಆಕ್ಷೇಪ ಮಾಡಿದೆ. ಪ್ರಮಾಣ ವಚನ ಸ್ವೀಕರಿಸಿ ಎರಡು ದಿನಗಳು ಕಳೆಯುಷ್ಟರಲ್ಲಿಯೇ ಈ ಬೆಳವಣಿಗೆ ನಡೆದಿದೆ.
ಅಲ್ಪಸಂಖ್ಯಾಕ ಸಮುದಾಯದ ಇತರ ನಾಯಕರನ್ನು ಶಿಕ್ಷಣ ಸಚಿವ ಸ್ಥಾನಕ್ಕೆ ಪರಿಗಣಿಸಬಹುದಿತ್ತು ಎಂದು ಆರ್‌ಜೆಡಿ ವಾದಿಸಿದೆ. 2017ರಲ್ಲಿ ಅವರು ಭಾಗಲ್ಪುರ ವಿವಿಯ ಕುಲಪತಿಗಳಾಗಿದ್ದಾಗ ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿಯ ವಿಜ್ಞಾನಿಗಳ ನೇಮಕ, ಕಟ್ಟಡ ನಿರ್ಮಾಣ ಯೋಜನೆಗಳಲ್ಲಿ ಅಕ್ರಮದ ಆರೋಪಗಳು ಅವರ ವಿರುದ್ಧ ಕೇಳಿಬಂದಿದ್ದವು.
ನಾಮಪತ್ರ ಸಲ್ಲಿಸುವ ವೇಳೆ ನೀಡಲಾಗಿದ್ದ ಅಫಿಡವಿಟ್‌ನಲ್ಲಿ ಆರೋಪದ ಬಗ್ಗೆ ಚೌಧರಿ ಉಲ್ಲೇಖೀಸಿದ್ದರು ಎಂದು ಆರ್‌ಜೆಡಿ ಹೇಳಿಕೊಂಡಿದೆ. ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಮೇವಾ ಲಾಲ್ ಚೌಧರಿ ಅಫಿಡವಿಟ್ ಆರೋಪಗಳ ಬಗ್ಗೆ ಉಲ್ಲೇಖೀಸಿಯೇ ಇಲ್ಲ. ಇದೆಲ್ಲ ಸುಳ್ಳು. ಈ ಬಗ್ಗೆ ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.