ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ಗೆ ಕೊಕ್
Team Udayavani, Aug 12, 2017, 2:57 PM IST
ನವದೆಹಲಿ:ಬಿಜೆಪಿಯೊಂದಿಗಿನ ಮೈತ್ರಿಯನ್ನು ಒಪ್ಪಿಕೊಳ್ಳುವುದಾದರೆ ಒಪ್ಪಿಕೊಳ್ಳಿ. ಇಲ್ಲದಿದ್ದರೆ ಹೊರ ನಡೆಯಿರಿ ಎಂದು ಜೆಡಿಯು ನಾಯಕ ಶರದ್ ಯಾದವ್ ಅವರಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಖಡಕ್ ಸಂದೇಶ ರವಾನಿಸಿದ ಬೆನ್ನಲ್ಲೇ ಜೆಡಿಯು ಪಕ್ಷದ ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ಅವರನ್ನು ವಜಾಗೊಳಿಸಿ ರಾಮ್ ಚಂದ್ರ ಪ್ರಸಾದ್ ಸಿಂಗ್ ಅವರನ್ನು ನೇಮಕ ಮಾಡಿದೆ.
ಈ ಭಾರೀ ರಾಜಕೀಯ ಬೆಳವಣಿಗೆಯನ್ನು ಮೂಲಗಳು ಖಚಿತಪಡಿಸಿದ್ದು, ಜೆಡಿಯು ಮುಖಂಡರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ನಮ್ಮ ಪಕ್ಷದ ಪ್ರತಿನಿಧಿಯನ್ನಾಗಿ ಸಿಂಗ್ ಅವರನ್ನು ಆಯ್ಕೆ ಮಾಡಿರುವುದಾಗಿ ಲಿಖಿತ ಮನವಿ ನೀಡಿರುವುದಾಗಿ ಬಿಹಾರ ಜೆಡಿಯು ಅಧ್ಯಕ್ಷ ವಶಿಷ್ಠ ನಾರಾಯಣ್ ಶನಿವಾರ ತಿಳಿಸಿದ್ದಾರೆ.
ಇತ್ತೀಚೆಗೆ ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದ್ದರಿಂದ ಸಿಎಂ ನಿತೀಶ್ ಕುಮಾರ್ ವಿರುದ್ಧ ಶರದ್ ಯಾದವ್ ಅವರು ಮುನಿಸಿಕೊಂಡಿದ್ದರು. ಅಲ್ಲದೆ ನಿತೀಶ್ ನಿರ್ಧಾರವನ್ನು ಬಹಿರಂಗವಾಗಿಯೇ ಟೀಕಿಸಿದ್ದರು. ಈ ಘಟನೆ ಬಳಿಕ ಜೆಡಿಯುನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.