ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ: ಅಚ್ಚರಿಯ ಹೇಳಿಕೆ ನೀಡಿದ ನಿತೀಶ್ ಕುಮಾರ್
Team Udayavani, Dec 31, 2022, 6:42 PM IST
ಪಾಟ್ನಾ: ಮುಂದಿನ ಸಾರ್ವತ್ರಿಕ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುತ್ತಿರುವ ತಮ್ಮ ಮಿತ್ರ ಪಕ್ಷವಾದ ಕಾಂಗ್ರೆಸ್ ನೊಂದಿಗೆ ನನಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಿತೀಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ನಾಯಕ ನಿತೀಶ್, ತಾನು ಪ್ರಧಾನಿ ಹುದ್ದೆಗೆ ‘ಹಕ್ಕುದಾರನಲ್ಲ’ ಎಂದು ಪುನರುಚ್ಚರಿಸಿದರು. ಆದರೂ ಅವರು ಬಿಜೆಪಿಯನ್ನು ವಿರೋಧಿಸುವ ಪಕ್ಷಗಳನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
2024 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರು ವಿರೋಧ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಇತ್ತೀಚೆಗೆ ಹೇಳಿದ್ದರು. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದರು.
2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರು ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಶುಕ್ರವಾರ ಹೇಳಿದ್ದರು. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಮಲ್ ನಾಥ್, ಅವರು ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ, ಆದರೆ ದೇಶದ ಸಾಮಾನ್ಯ ಜನರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.