ಶೇ.50ರಷ್ಟು ಇವಿಎಂ-ವಿವಿಪ್ಯಾಟ್ ಹೋಲಿಕೆ ಸಾಧ್ಯವಿಲ್ಲ; ವಿಪಕ್ಷಗಳ ಅರ್ಜಿ ವಜಾ
Team Udayavani, May 7, 2019, 1:32 PM IST
ನವದೆಹಲಿ: ಲೋಕಸಭಾ ಚುನಾವಣೆಯ ಮತಎಣಿಕೆ ವೇಳೆ ಶೇ.50ರಷ್ಟು ಇವಿಎಂಗಳ ವಿವಿಪ್ಯಾಟ್ ಗಳನ್ನು ಹೋಲಿಕೆ ಮಾಡಬೇಕೆಂದು ಆಗ್ರಹಿಸಿ 21 ರಾಜಕೀಯ ಪಕ್ಷಗಳು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ವೇಳೆ ಇವಿಎಂಗಳ ವಿವಿಪ್ಯಾಟ್ ಗಳ ಹೋಲಿಕೆಯ ಸಂಖ್ಯೆಯನ್ನು ಶೇ.5ಕ್ಕೆ ಏರಿಸಬೇಕೆಂದು ಈಗಾಗಲೇ ನಾವು ನೀಡಿರುವ ಆದೇಶವನ್ನು ಮತ್ತೆ ಬದಲಾವಣೆ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯ್ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿ, ವಿಪಕ್ಷಗಳ ವಿವಿಪ್ಯಾಟ್ ಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಯನ್ನು ತಿರಸ್ಕರಿಸಿದೆ.
ಈ ಹಿಂದಿನ ಚುನಾವಣೆಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಯ್ದ ಒಂದು ಕ್ಷೇತ್ರದ ಇವಿಎಂ ಮತ್ತು ವಿವಿಪ್ಯಾಟ್ ಅನ್ನು ಪರಿಶೀಲಿಸುವ ಪರಿಪಾಠವಿತ್ತು. ಅದನ್ನು ಸುಪ್ರೀಂಕೋರ್ಟ್ ಶೇ.5ಕ್ಕೆ ಏರಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.