ಇಲ್ಲಿ ಹೆಣ್ಣು ಶಿಶುವೇ ಜನಿಸಿಲ್ಲ
ಉತ್ತರಕಾಶಿಯ 132 ಗ್ರಾಮಗಳಲ್ಲಿ ಆಘಾತಕಾರಿ ಬೆಳವಣಿಗೆ
Team Udayavani, Jul 23, 2019, 5:08 AM IST
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯ ಜಿಲ್ಲೆಯ 132 ಗ್ರಾಮಗಳಲ್ಲಿ ಮೂರು ತಿಂಗಳ ಅವಧಿಯಲ್ಲಿ ಹೆಣ್ಣು ಮಕ್ಕಳೇ ಹುಟ್ಟಿಲ್ಲ. ಜನಿಸಿರುವ ಶಿಶುಗಳೆಲ್ಲವೂ ಗಂಡು. ಉತ್ತರಕಾಶಿಯ ಜಿಲ್ಲಾಡಳಿತ ನಡೆಸಿರುವ ಅಧ್ಯಯನದಿಂದಲೇ ಈ ಮಾಹಿತಿ ಹೊರ ಬಿದ್ದಿದೆ ಎಂದು “ಎಎನ್‌ಐ’ ವರದಿ ಮಾಡಿದೆ. ಈ ಅಧ್ಯಯನದ ಪ್ರಕಾರ ಹಿಂದಿನ ಮೂರು ತಿಂಗಳ ಅವಧಿಯಲ್ಲಿ 216 ಶಿಶುಗಳು ಜನಿಸಿ ದ್ದೆಲ್ಲವೂ, ಗಂಡು. ಈ ಅಂಶ ಜಿಲ್ಲಾಡಳಿತವನ್ನು ಆಘಾತಕ್ಕೆ ದೂಡಿದೆ. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ| ಆಶಿಶ್ ಚೌಹಾಣ್ ಹೆಣ್ಣು ಮಕ್ಕಳು ಜನಿಸದೇ ಇರುವ ಪ್ರದೇಶಗಳನ್ನು ಗುರುತಿಸಿದ್ದೇವೆ. ಗಂಡು ಮತ್ತು ಹೆಣ್ಣು ಮಕ್ಕಳ ಸಂಖ್ಯೆ ನಡುವೆ ಇರುವ ಅಂತರದ ಬಗ್ಗೆ ಗಮನ ಹರಿಸಲಿದ್ದೇವೆ. ಈ ಬೆಳವಣಿಗೆ ಬಗ್ಗೆ ಸಮಗ್ರ ಸಮೀಕ್ಷೆ ಮತ್ತು ಅಧ್ಯಯನ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.
ಆಶಾ ಕಾರ್ಯಕರ್ತೆ, ಜನಪ್ರತಿನಿಧಿಗಳ ಸಭೆ
ಇಷ್ಟು ಮಾತ್ರವಲ್ಲ ಈ 132 ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿರುವ ಆಶಾ ಕಾರ್ಯಕರ್ತೆಯರು, ಜನಪ್ರತಿನಿಧಿಗಳ ಜತೆಗೆ ಕೂಡ ಜಿಲ್ಲಾಡಳಿತ ಸಭೆ ನಡೆಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ಸಾಮಾಜಿಕ ಕಾರ್ಯಕರ್ತೆ ಕಲ್ಪನಾ ಠಾಕೂರ್ ಮೂರು ತಿಂಗಳ ಅವಧಿಯಲ್ಲಿ ಹೆಣ್ಣು ಮಕ್ಕಳು ಹುಟ್ಟಿಯೇ ಇಲ್ಲ ಎಂದಾದರೆ ಶಿಶು ಹತ್ಯೆ ನಡೆದಿರಲೇಬೇಕು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರ ಹೆಣ್ಣು ಮಕ್ಕಳ ಪೋಷಣೆಗಾಗಿ “ಬೇಟಿ ಬಚಾವೋ; ಬೇಟಿ ಪಡಾವೋ’ ಯೋಜನೆ ಜಾರಿಗೆ ತಂದಿರುವಂತೆಯೇ ಇಂಥ ಬೆಳವಣಿಗೆಯಾಗಿರುವುದು ಅಚ್ಚರಿ ಹುಟ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.