ಮೋದಿ ಪ್ರಧಾನಿಯಾಗಿರುವವರೆಗೂ ರೈತರ ಜಮೀನು ಸುರಕ್ಷಿತ: ಅಮಿತ್ ಶಾ
ರೈತರ ಕೃಷಿ ಬೆಂಬಲ ಬೆಲೆಯಲ್ಲಿಯೂ ಯಾವುದೇ ಬದಲಾವಣೆಗಳು ಆಗುವುದಿಲ್ಲ
Team Udayavani, Dec 25, 2020, 5:11 PM IST
ನವದೆಹಲಿ: ನರೇದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೂ ಯಾವುದೇ ಕಾರ್ಪೋರೇಟ್ ಕಂಪನಿಗಳಿಗೆ ರೈತರ ಜಮೀನನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ಕಿಸಾನ್ ಗಡ ಗ್ರಾಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು ನೂತನ ಕೃಷಿ ಕಾಯ್ದೆಗಳು ರೈತರ ಹಿತದೃಷ್ಟಿಯಿಂದಲೇ ರೂಪಿಸಲಾಗಿದ್ದು, ಅವುಗಳು ರೈತ ವಿರೋಧಿ ಎಂಬ ಅನುಮಾನಗಳಿದ್ದರೆ ಆ ಎಲ್ಲಾ ವಿಧವಾದ ಅನುಮಾನಗಳನ್ನು ತೆರೆದ ಮನಸ್ಸಿನಿಂದ ರೈತರ ಜೊತೆ ಚರ್ಚಿಸಿ ಬಗೆಹರಿಸಲು ಕೇಂದ್ರ ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿದರು.
ನೂತನವಾದ ಈ ಕಾಯ್ದೆಗಳನ್ನು ಜಾರಿಗೆ ತರುವುದರಿಂದ ರೈತರಿಗೆ ಯಾವುದೇ ವಿಧವಾದ ಸಮಸ್ಯೆಗಳು ಆಗುವುದಿಲ್ಲ, ಜೊತೆಗೆ ರೈತರ ಕೃಷಿ ಬೆಂಬಲ ಬೆಲೆಯಲ್ಲಿಯೂ ಯಾವುದೇ ಬದಲಾವಣೆಗಳು ಆಗುವುದಿಲ್ಲ ಎಂದರು.
ಇದನ್ನೂ ಓದಿ:ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ: ಆರು ರಾಜ್ಯದ ಕೃಷಿಕರ ಜೊತೆ ಮೋದಿ ಸಂವಾದ
ಬೆಂಬಲ ಬೆಲೆಯನ್ನು ಒಳಗೊಂಡಂತೆ ನೂತನ ಕೃಷಿ ಕಾಯ್ದೆಯಲ್ಲಿ ಇರುವ ಅಂಶಗಳ ಕುರಿತಾಗಿ ವಿರೋಧ ಪಕ್ಷಗಳು ರೈತರಿಗೆ ತಪ್ಪು ಮಾಹಿತಿ ನೀಡುತ್ತಿವೆ. ರೈತರನ್ನು ಅಭಿವೃದ್ಧಿಯ ಕಡೆ ಕೊಂಡೊಯ್ಯುವುದೇ ಮೋದಿ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ನುಡಿದರು.
ಇದನ್ನೂ ಓದಿ:ಚರ್ಚ್ಗಳಲ್ಲಿ ಸರಳ ಆಚರಣೆ, ಮನೆಗಳಲ್ಲಿ ಸಂಭ್ರಮ
ಈ ಸಂದರ್ಭದಲ್ಲಿ ಕಿಸಾನ್ ಸಮ್ಮಾನ್ ನಿಧಿಯಡಿ ವಿವಿಧ ರಾಜ್ಯದ ರೈತರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದನ್ನು ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.