ದೇಶಾದ್ಯಂತ ಎನ್ ಆರ್ ಸಿ ಜಾರಿ ಬಗ್ಗೆ ನಿರ್ಧರಿಸಿಲ್ಲ: ಲೋಕಸಭೆಗೆ ಕೇಂದ್ರ ಗೃಹ ಸಚಿವಾಲಯ
ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ಲೋಕಸಭೆಗೆ ಲಿಖಿತ ಉತ್ತರ
Team Udayavani, Feb 4, 2020, 2:48 PM IST
ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಲೋಕಸಭೆಗೆ ಅಧಿಕೃತವಾಗಿ ಲಿಖಿತ ಹೇಳಿಕೆ ನೀಡಿದೆ.
ಸಿಎಎ ರೀತಿ ಎನ್ ಆರ್ ಸಿಯನ್ನು ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸುವ ಯಾವುದಾದರು ಯೋಜನೆ ಹೊಂದಿದೆಯೇ ಎಂಬ ಪ್ರಶ್ನೆಗೆ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದು, ದೇಶಾದ್ಯಂತ ಎನ್ ಆರ್ ಸಿ ಜಾರಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಷ್ಟೇ ಅಲ್ಲ ದೇಶಾದ್ಯಂತ ಎನ್ ಆರ್ ಸಿ ಜಾರಿ ಕುರಿತ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವು ಹೇಗೆ ಜನರ ಮೇಲೆ ಹೆಚ್ಚುವರಿ ಭಾರ ಹೊರಿಸಲು ಸಾಧ್ಯ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಶ್ನಿಸಿದೆ ಎಂದು ವರದಿ ತಿಳಿಸಿದೆ.
ಸೋಮವಾರ ಲೋಕಸಭೆಯಲ್ಲಿ ಆರಂಭಗೊಂಡ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸಿಎಎ ಮತ್ತು ಎನ್ ಆರ್ ಸಿ ಮತ್ತು ಎನ್ ಪಿಆರ್ ಬಗ್ಗೆ ಚರ್ಚೆ ನಡೆಸಿ ಉತ್ತರ ನೀಡುವಂತೆ ಪಟ್ಟು ಹಿಡಿದಿದ್ದವು.
ಕಾಂಗ್ರೆಸ್ ಪಕ್ಷದ ಗುಲಾಂ ನಬಿ ಅಜಾದ್, ಡಿಎಂಕೆ, ಸಿಪಿಐ, ಸಿಪಿಐಎಂ, ಎನ್ ಸಿಪಿ, ಆರ್ ಜೆಡಿ, ಟಿಎಂಸಿ, ಎಸ್ಪಿ, ಬಿಎಸ್ಪಿ ನಿಯಮ 267ರ ಅಡಿ ನೋಟಿಸ್ ನೀಡಿ ಎಲ್ಲಾ ಚರ್ಚೆಯನ್ನು ಬದಿಗೊತ್ತಿ ಸಿಎಎ, ಎನ್ ಪಿಆರ್ ಮತ್ತು ಎನ್ ಆರ್ ಸಿ ಬಗ್ಗೆ ಚರ್ಚೆ ನಡೆಸುವಂತೆ ಮನವಿ ಮಾಡಿಕೊಂಡಿದ್ದವು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.