Goa ದೂಧ್ ಸಾಗರ್ ಜಲಪಾತಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ
Team Udayavani, Jul 22, 2023, 6:26 PM IST
ಪಣಜಿ: ಇತ್ತೀಚಿನ ದಿನಗಳಲ್ಲಿ ಗೋವಾದಲ್ಲಿ ಪ್ರವಾಸಿಗರು ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ದೂಧ್ ಸಾಗರ್ ಜಲಪಾತಕ್ಕೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಿದ್ದಾರೆ.
ದಕ್ಷಿಣ ಗೋವಾದ ಜಿಲ್ಲಾಧಿಕಾರಿ ಅಶ್ವಿನ್ ಚಂದ್ರು ಅವರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದಾರೆ. ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿದ್ದು, ದೂಧ್ ಸಾಗರಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದ್ದಾರೆ.
ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ಪ್ರಕಾರ
1).ದೂಧ್ ಸಾಗರ್ ಜಲಪಾತ, ದೂಧ್ ಸಾಗರ್ ರೈಲ್ವೆ ನಿಲ್ದಾಣ, ದೂಧ್ ಸಾಗರ್ ಜಲಪಾತದ ಬಳಿಯ ರೈಲ್ವೆ ಸೇತುವೆ ಮೇಲೆ ಪ್ರವಾಸಿಗರು, ಚಾರಣಿಗರು ಮತ್ತು ಇತರರಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪೊಲೀಸರು, ರೈಲ್ವೆ ಸಿಬ್ಬಂದಿ, ಅರಣ್ಯ ಸಿಬ್ಬಂದಿ ಹಾಗೂ ಕರ್ತವ್ಯದಲ್ಲಿರುವ ಸರ್ಕಾರಿ ಅಧಿಕಾರಿಗಳನ್ನು ಹೊರತುಪಡಿಸಿ ಯಾರೂ ಇಲ್ಲಿಗೆ ಹೋಗುವಂತಿಲ್ಲ.
2).ಆದಾಗ್ಯೂ, ದೂಧ್ ಸಾಗರ್ ಜಲಪಾತದ ತಪ್ಪಲಿನಲ್ಲಿ ಗೊತ್ತುಪಡಿಸಿದ ಮಾರ್ಗವನ್ನು ಅನುಸರಿಸಲು ಅನುಮತಿ ನೀಡಲಾಗುತ್ತದೆ. ಪ್ರವಾಸಿಗರು ಅರಣ್ಯ ಇಲಾಖೆಯ ನಿಯಮಗಳನ್ನು ಪಾಲಿಸಬೇಕು. ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು.
3).ಕುಳೆ, ಕ್ಯಾಸಲ್ ರಾಕ್, ಸೋನಾವಲಿ ಮತ್ತು ಕರಂಜೋಲ್‍ನಲ್ಲಿ ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗುವುದು. ಪೊಲೀಸ್, ರೈಲ್ವೆ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಇರುತ್ತಾರೆ. ಇಲ್ಲಿಂದ ಪ್ರವೇಶವನ್ನು ಮುಚ್ಚಲಾಗುತ್ತದೆ. ನೈಋತ್ಯ ರೈಲ್ವೆಯಿಂದ ಎಲ್ಲಾ ನಾಲ್ಕು ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ನಿಗಾ ಕೂಡ ಇರುತ್ತದೆ.
4).ನೈಋತ್ಯ ರೈಲ್ವೆಯಿಂದ ಬ್ಯಾರಿಕೇಡಿಂಗ್ ಮಾಡಲಾಗುವುದು. ಜಲಪಾತದಲ್ಲಿ ಇಂಗ್ಲಿಷ್, ಮರಾಠಿ, ಕೊಂಕಣಿ, ಕನ್ನಡ ಮತ್ತು ಹಿಂದಿ ಭಾಷೆಯ ಪ್ರವೇಶ ನಿಷೇಧದ ಫಲಕಗಳನ್ನು ಸಹ ಅಳವಡಿಸಲಾಗುವುದು.
5).ಮೇಲ್ಕಂಡ ನಿಯಮಗಳ ಉಲ್ಲಂಘನೆಗಾಗಿ ಅಥವಾ ನೌಕರರು ಮತ್ತು ಅಧಿಕಾರಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಸಂಬಂಧಪಟ್ಟವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಜಿಲ್ಲಾಧಿಕಾರಿಗಳ ಈ ಆದೇಶಪತ್ರವನ್ನು ಜಿಲ್ಲಾಧಿಕಾರಿಗಳು ನೈಋತ್ಯ ರೈಲ್ವೆ ಹುಬ್ಬಳ್ಳಿ ಕಚೇರಿ, ಹುಬ್ಬಳ್ಳಿ ರೈಲ್ವೆ ಪೊಲೀಸ್, ವನ್ಯಜೀವಿ ರೇಂಜರ್ ಫೊಂಡಾ, ಕುಲೆ ಪೊಲೀಸ್ ಠಾಣೆ, ಸಹಾಯಕ ಅರಣ್ಯ ರಕ್ಷಕ ಉತ್ತರ ಗೋವಾ, ಕಾರ್ಯದರ್ಶಿ ಮತ್ತು ಗೆಡಾ ಸದಸ್ಯರಿಗೆ ಪತ್ರಗಳನ್ನು ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.