ತೈಲದ ಮೇಲೆ ಅಬಕಾರಿ ಸುಂಕ ಇಳಿಕೆಯಿಲ್ಲ: ಜೇಟ್ಲಿ
Team Udayavani, Jun 19, 2018, 10:56 AM IST
ಹೊಸದಿಲ್ಲಿ: ಸರಕಾರಕ್ಕೆ ಆದಾಯದ ಮೂಲವೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವಾಗಿದ್ದು, ಇದರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ನಾಗರಿಕರು ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡಬೇಕಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಈ ಮೂಲಕ, ಸದ್ಯದ ಮಟ್ಟಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವುದು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಜನರು ತೆರಿಗೆ ತಪ್ಪಿಸುವುದನ್ನು ನಿಲ್ಲಿಸಬೇಕು. ಜನ ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡಿದರೆ, ಸಹಜವಾಗಿಯೇ ತೈಲ ಉತ್ಪನ್ನಗಳ ಮೇಲೆ ಸರಕಾರದ ಅವಲಂಬನೆ ಕಡಿಮೆಯಾಗುತ್ತದೆ. ಹೀಗಾಗಿ ತೈಲದ ಮೇಲಿನ ತೆರಿಗೆಯೂ ಕಡಿಮೆಯಾಗುತ್ತದೆ ಎಂದು ಜೇಟ್ಲಿ ಫೇಸ್‌ಬುಕ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಸಾಮಾನ್ಯವಾಗಿ ನೌಕರವರ್ಗ ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತದೆ. ಆದರೆ ಇತರ ವರ್ಗಗಳು ತಮ್ಮ ತೆರಿಗೆ ಪಾವತಿ ಪ್ರಮಾಣ ವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದಿದ್ದಾರೆ.
ಈ ಮಧ್ಯೆ, ಮಾರ್ಚ್‌ನಲ್ಲಿ ಕೊನೆಗೊಂಡ ತ್ತೈಮಾಸಿಕದಲ್ಲಿ ವಿತ್ತೀಯ ಪ್ರಗತಿ ಶೇ. 7.7 ರಲ್ಲಿದ್ದು, ಭಾರತವನ್ನು ವಿಶ್ವದಲ್ಲೇ ಬೆಳವಣಿಗೆ ಕಾಣುತ್ತಿರುವ ಪ್ರಮುಖ ಆರ್ಥಿಕತೆ ಯನ್ನಾಗಿಸಿದೆ. ಅದರಲ್ಲೂ ಮುಂದಿನ ದಿನಗಳಲ್ಲಿ ಪ್ರಗತಿ ತ್ವರಿತವಾಗಿರಲಿದೆ ಎಂದು ಅವರು ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ 25 ರೂ. ಕಡಿತಗೊಳಿಸುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಸಲಹೆ ನಮ್ಮನ್ನು ಸಿಲುಕಿಹಾಕಿಸುವಂಥದ್ದು ಎಂದಿದ್ದಾರೆ.
ವಿತ್ತೀಯ ಕೊರತೆ ಶೇ. 3.3ರಲ್ಲಿ: ಚುನಾವಣೆಯಿದ್ದರೂ ಈ ವಿತ್ತ ವರ್ಷದಲ್ಲಿ ವಿತ್ತೀಯ ಕೊರತೆ ಜಿಡಿಪಿಯ ಶೇ. 3.3ರಲ್ಲೇ ಇರಲಿದೆ ಎಂದು ಹಣಕಾಸು ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ. ಆದರೆ ಇದಕ್ಕೆ ವೆಚ್ಚ ಕಡಿತ ಮಾಡುವುದಿಲ್ಲ. ಸರಕಾರದ ಬಳಿ ಹೆಚ್ಚುವರಿ ಸಂಪನ್ಮೂಲವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.