ಗಾಂಧಿ ಕುಟುಂಬಕ್ಕೆ ಅಧ್ಯಕ್ಷ ಸ್ಥಾನ ಬೇಡ: ಮಹತ್ವದ ನಿರ್ಧಾರ ಕೈಗೊಂಡ ರಾಹುಲ್
Team Udayavani, Sep 23, 2022, 10:54 AM IST
ಹೊಸದಿಲ್ಲಿ: ಗಾಂಧಿ ಕುಟುಂಬದಿಂದ ಯಾರೂ ಮುಂದಿನ ಪಕ್ಷದ ಅಧ್ಯಕ್ಷರಾಗಬಾರದು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಕಣ ತೀವ್ರಗೊಳ್ಳುತ್ತಿರುವಂತೆಯೇ ರಾಹುಲ್ ಈ ಹೇಳಿಕೆ ಭಾರೀ ಮಹತ್ವ ಪಡೆದಿದೆ.
ಶುಕ್ರವಾರ ಕೇರಳದಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಅಶೋಕ್ ಗೆಹ್ಲೋಟ್, “ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ನಾನು ಅವರಿಗೆ (ರಾಹುಲ್ ಗಾಂಧಿ) ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ ಗಾಂಧಿ ಕುಟುಂಬದ ಯಾರೂ ಮುಂದಿನ ಮುಖ್ಯಸ್ಥರಾಗಬಾರದು ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ” ಎಂದಿದ್ದಾರೆ.
ದೇಶದ ಸದ್ಯದ ಸ್ಥಿತಿಯನ್ನು ಗಮನಿಸಿದರೆ ಪ್ರತಿಪಕ್ಷಗಳು ಬಲಿಷ್ಠವಾಗಬೇಕಿದೆ ಎಂದರು. ಶೀಘ್ರದಲ್ಲೇ ಚುನಾವಣೆಗೆ ನಾಮಪತ್ರ ಸಲ್ಲಿಸುವುದಾಗಿ ಗೆಹ್ಲೋಟ್ ತಿಳಿಸಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರು: ಈರುಳ್ಳಿ ಬೆಳೆ ಸಮಸ್ಯೆ; ಮನನೊಂದ ರೈತ ಬೆಳೆ ಮೇಲೆ ಟ್ರ್ಯಾಕ್ಟರ್ ಚಾಲನೆ
ಅಶೋಕ್ ಗೆಹ್ಲೋಟ್ ಮತ್ತು ಸಂಸದ ಶಶಿ ತರೂರ್ ಅವರು ಮುಂಬರುವ ಚುನಾವಣೆಗೆ ಸಂಭಾವ್ಯ ಸ್ಪರ್ಧಿಗಳಾಗಿದ್ದಾರೆ. ಆದಾಗ್ಯೂ, ದೇಶಾದ್ಯಂತ ಕಾಂಗ್ರೆಸ್ ಸಮಿತಿಗಳು ಸಭೆಗಳನ್ನು ನಡೆಸುತ್ತಿವೆ, ಅದರಲ್ಲಿ “ಆಯ್ಕೆಯಾಗಿ ಬರುವ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸಿಸಿ ಮತ್ತು ಎಐಸಿಸಿ ಸದಸ್ಯರನ್ನು ನೇಮಿಸಲು ನಾವು ಅಧಿಕಾರ ನೀಡುತ್ತೇವೆ” ಎಂಬ ನಿರ್ಣಯವನ್ನು ಅಂಗೀಕರಿಸಲಾಗಿದೆ.
#WATCH | Kerala: “I have requested him (Congress MP Rahul Gandhi) multiple times to accept everyone’s proposal of becoming the Congress President. He made it clear that no one from the Gandhi family should become the next chief,” said Rajasthan CM Ashok Gehlot pic.twitter.com/yEodA4l7fW
— ANI (@ANI) September 23, 2022
ರಾಹುಲ್ ಗಾಂಧಿ ಅವರೇ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸಬೆಕು ಎಂದು ಹಲವರು ನಾಯಕರು ಒತ್ತಡ ಹೇರಿದ್ದಾರೆ. ಆದರೆ ಇದೀಗ ಗಾಂಧಿ ಕುಟುಂಬವೇ ಸ್ಪರ್ಧೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ “ನಾನು ಕಾಂಗ್ರೆಸ್ ಅಧ್ಯಕ್ಷನಾಗುತ್ತೇನೆಯೇ ಅಥವಾ ಇಲ್ಲವೇ ಎಂಬುದು ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆದಾಗ ಸ್ಪಷ್ಟವಾಗುತ್ತದೆ” ಎಂದು ಹೇಳಿದ್ದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.