ಗುಜರಾತ್ ಫಲಿತಾಂಶದಿಂದ ಭಾರತ್ ಜೋಡೋ ಯಾತ್ರೆ ವಿಚಲಿತವಾಗಿಲ್ಲ: ಕಾಂಗ್ರೆಸ್
ಬಿಜೆಪಿ, ಎಎಪಿ ಮತ್ತು ಎಐಎಂಐಎಂ ಮೈತ್ರಿ ಮಾಡಿಕೊಂಡಿದ್ದವು....
Team Udayavani, Dec 10, 2022, 2:42 PM IST
ಜೈಪುರ: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶದಿಂದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಯಾವುದೇ ರೀತಿಯಲ್ಲಿ ವಿಚಲಿತವಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಶನಿವಾರ ಪ್ರತಿಪಾದಿಸಿದ್ದು, ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನವನ್ನು ವಿಶ್ಲೇಷಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಬುಂಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ”ಗುಜರಾತ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ಬಿಜೆಪಿಯು ಚುನಾವಣಾ ಪ್ರಚಾರದಲ್ಲಿ ಹೆಣ್ಣು ಮಗುವನ್ನು ಬಳಸಿಕೊಂಡಿದೆ ಎಂಬ ಕಾಂಗ್ರೆಸ್‌ನ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅವರು ಆರೋಪಿಸಿದರು.
ಗುಜರಾತ್‌ನಲ್ಲಿ ಪಕ್ಷ ಸಂಘಟನೆಯಲ್ಲಿ ಲೋಪಗಳಿರುವುದನ್ನು ಒಪ್ಪಿಕೊಂಡು, ಬಿಜೆಪಿ, ಎಎಪಿ ಮತ್ತು ಎಐಎಂಐಎಂ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸ್‌ಗೆ ಅಡ್ಡಿಯಾಗಿದೆ ಎಂದು ರಮೇಶ್ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರಿಗೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿದಿದೆ. ಫಲಿತಾಂಶಗಳು ನಮಗೆ ನಿರಾಶಾದಾಯಕವಾಗಿವೆ. ಕಾಂಗ್ರೆಸ್ ನ ಮತಗಳಿಕೆ ಶೇ.40ರಿಂದ ಶೇ.27ಕ್ಕೆ ಕುಸಿದಿದೆ. ಆದರೆ ಶೇಕಡಾ 27 ರಷ್ಟು ಮತಗಳು ಅಡಿಪಾಯವಾಗಿದ್ದು, ಮತ್ತೆ ಶೇಕಡಾ 40 ರಷ್ಟು ಮತಗಳನ್ನು ಹೆಚ್ಚಿಸುವುದು ನಮಗೆ ಕಷ್ಟವಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.