Panaji: ಪಾರ್ಕಿಂಗ್ ಶುಲ್ಕದಲ್ಲಿ ಯಾವುದೇ ಹೆಚ್ಚಳ ಇಲ್ಲ… :ಮೇಯರ್ ರೋಹಿತ್ ಮೊನ್ಸೆರಾತ್
Team Udayavani, Jun 7, 2024, 1:52 PM IST
ಪಣಜಿ: ಪಣಜಿ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಲ್ಲಿ ವಾಹನ ನಿಲುಗಡೆ ಶುಲ್ಕದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಪಾರ್ಕಿಂಗ್ ಶುಲ್ಕವನ್ನು ಸಂಗ್ರಹಿಸುವ ಗುತ್ತಿಗೆದಾರರಿಗೆ ಶುಲ್ಕವನ್ನು ತಿಳಿಸುವ ಸೂಚನಾ ಫಲಕವನ್ನು ಸ್ಥಾಪಿಸಲು ಸೂಚಿಸಲಾಗಿದೆ ಎಂದು ಪಣಜಿ ಮೇಯರ್ ರೋಹಿತ್ ಮೊನ್ಸೆರಾತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಪಣಜಿ ಮಹಾನಗರದ ವಿವಿಧೆಡೆ ಪಾರ್ಕಿಂಗ್ ಶುಲ್ಕದ ಮಾಹಿತಿ ಫಲಕಗಳು ಇಲ್ಲವಾಗಿದೆ. ಹಾಗಾಗಿ ವಾಹನ ನಿಲುಗಡೆಗೆ ಹೆಚ್ಚಿನ ಶುಲ್ಕವನ್ನು ಚಾಲಕರಿಂದ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳಿವೆ.
ಅಲ್ಲದೆ, ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಗುತ್ತಿಗೆದಾರರು ಗೊತ್ತುಪಡಿಸಿದ ಕೆಲ ನೌಕರರು ಶುಲ್ಕ ವಸೂಲಿ ಮಾಡುವಾಗ ವಾಹನ ಸವಾರರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವ ಗುತ್ತಿಗೆದಾರರ ನೌಕರರ ಬಗ್ಗೆ ಪುರಸಭೆಗೆ ದೂರು ನೀಡಿದರೆ ಗುತ್ತಿಗೆದಾರರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಮಾನ್ಸೆರಾತ್ ತಿಳಿಸಿದರು.
ನಗರದ ವಿವಿಧೆಡೆ ಅಳವಡಿಸಿರುವ ಪಾರ್ಕಿಂಗ್ ಶುಲ್ಕದ ಫಲಕಗಳು ದೋಷಪೂರಿತವಾಗಿರುವುದು ಕಂಡು ಬಂದಿದ್ದು, ನಗರದಲ್ಲಿ ಹೊಸ ಫಲಕಗಳನ್ನು ಹಾಕುವಂತೆ ಗುತ್ತಿಗೆದಾರರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಮಾನ್ಸೆರಾತ್ ತಿಳಿಸಿದರು.
ಇದನ್ನೂ ಓದಿ: Russia: ನದಿಯಲ್ಲಿ ಮುಳುಗಿ ಭಾರತೀಯ ಮೂಲದ ನಾಲ್ವರು ವಿದ್ಯಾರ್ಥಿಗಳ ದುರಂತ ಅಂತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.