ಡಿಜಿಟಲ್‌ ಪಾವತಿಗೆ ಮತ್ತಷ್ಟು ಉತ್ತೇಜನ

Team Udayavani, Dec 16, 2017, 6:25 AM IST

Debit-card-152017.jpg

ಹೊಸದಿಲ್ಲಿ: ಡಿಜಿಟಲ್‌ ಪಾವತಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರ ಸರಕಾರ, 2000 ರೂ.ವರೆಗಿನ ಡೆಬಿಟ್‌ ಕಾರ್ಡ್‌ ವಹಿವಾಟುಗಳ ಮೇಲೆ ವ್ಯಾಪಾರಿಗಳಿಗೆ ವಿಧಿಸಲಾಗುವ ಶುಲ್ಕವನ್ನು ರದ್ದುಗೊಳಿಸಿದೆ. 

ಡೆಬಿಟ್‌ ಕಾರ್ಡ್‌ ಜತೆಗೆ ಆಧಾರ್‌ ಪಾವತಿ ವ್ಯವಸ್ಥೆ ಮತ್ತು ಭೀಮ್‌ ಯುಪಿಐ ಮೂಲಕ ಮಾಡಲಾಗುವ ವಹಿವಾಟುಗಳಿಗೂ ಶುಲ್ಕವನ್ನು ರದ್ದುಗೊಳಿಸಲಾಗಿದೆ. ಇದು 2018ರ ಜನವರಿ 1 ರಂದು ಅನ್ವಯವಾಗಲಿದ್ದು ,2 ವರ್ಷಗಳವರೆಗೆ ಈ ಶುಲ್ಕವನ್ನು ಕೇಂದ್ರ ಸರಕಾರ ಭರಿಸಲಿದೆ. ಈ ನಿರ್ಧಾರದಿಂದ ಸರಕಾರಕ್ಕೆ 2,512 ಕೋಟಿ ರೂ. ಹೊರೆಯಾಗಲಿದೆ. 

ಈ ನಿರ್ಧಾರದಿಂದಾಗಿ ಬ್ಯಾಂಕ್‌ಗಳಿಗೆ ಸರಕಾರ ಪಾವತಿಸಬೇಕಿರುವ ಶುಲ್ಕದ ಪ್ರಮಾಣ ಮತ್ತು ವಿಧಾನವನ್ನು ನಿಗದಿಸಲು ಸಮಿತಿ ರಚಿಸಲಾಗಿದೆ. ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ, ಇಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ, ರಾಷ್ಟ್ರೀಯ ಪಾವತಿ ಕಾರ್ಪೊರೇಶನ್‌ನ ಸಿಇಒ ಈ ಸಮಿತಿಯಲ್ಲಿರಲಿದ್ದಾರೆ. 

ಎಂಸಿಐ ಅಲ್ಲ ಎನ್‌ಎಂಸಿ: ಮತ್ತೂಂದು ಪ್ರಮುಖ ನಿರ್ಧಾರದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಆಮೂಲಾಗ್ರ ಬದಲು ಮಾಡಲು ಮುಂದಾಗಿ ರುವ ಸರಕಾರ ಸದ್ಯ ಇರುವ ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ರಚನೆಯಾಗಲಿದೆ. ಈ ಮೂಲಕ ವೈದ್ಯಕೀಯ ಶಿಕ್ಷಣದ ಮೇಲೆ ಸಂಪೂರ್ಣವಾಗಿ ಕೇಂದ್ರ ಸರಕಾರದ ಮಾತೇ ನಡೆಯುವಂ ತಾಗಬೇಕು ಎನ್ನುವುದು ಸರಕಾರದ ನಿಲುವು. 

ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಸದ್ಯ ಎಂಸಿಐ ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಪ್ರತ್ಯೇಕವಾಗಿಯೇ ನಿರ್ವಹಿಸಲಾಗುತ್ತದೆ. ವೈದ್ಯಕೀಯ ವೃತ್ತಿಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಕೂಡ ಪುನರ್‌ರೂಪಿಸಲಾಗುತ್ತದೆ.

ಈ ಆಯೋಗದಲ್ಲಿ ಗಣ್ಯ ವೈದ್ಯರು ಮತ್ತು ಪರಿಣಿತರು ಸದಸ್ಯರಾಗಿರಲಿದ್ದಾರೆ. ಇವರು ಜಾಗತಿಕ ಗುಣಮಟ್ಟಕ್ಕೆ ಅನುಗುಣವಾಗಿ ಶಿಕ್ಷಣದ ಗುಣಮಟ್ಟವನ್ನು ಏರಿಸಲು ಶ್ರಮಿಸಲಿದ್ದಾರೆ.

ಚರ್ಮ ಮತ್ತು ಪಾದರಕ್ಷೆ ವಲಯಕ್ಕೆ 2600 ಕೋಟಿ ರೂ. ಪ್ಯಾಕೇಜ್‌: ಚರ್ಮ ಮತ್ತು ಪಾದರಕ್ಷೆ ಉದ್ಯಮಕ್ಕೆ 2600 ಕೋಟಿ ರೂ. ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ಮೂರು ವರ್ಷಗಳಲ್ಲಿ 3.24 ಲಕ್ಷ ಉದ್ಯೋಗ ಸೃಷ್ಟಿ ಗುರಿ ಹೊಂದಲಾಗಿದೆ.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.