ಹುತಾತ್ಮರ ಕುಟುಂಬಕ್ಕೆ ಇನ್ನು ಏಕರೂಪದ ಪರಿಹಾರ ಮೊತ್ತ
Team Udayavani, Nov 23, 2021, 5:50 AM IST
ಹೊಸದಿಲ್ಲಿ: ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್)ಯ ಯೋಧರ ಕುಟುಂಬಕ್ಕೆ ನೀಡಲಾಗುವ ಆರ್ಥಿಕ ನೆರವಿನ ಮೊತ್ತವನ್ನು ಹೆಚ್ಚಳ ಮಾಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಗೃಹ ಇಲಾಖೆ ಕೈಗೊಂಡಿದೆ.
ಹುತಾತ್ಮರಿಗೆ ಆರ್ಥಿಕ ನೆರವು ನೀಡುವ ವಿಚಾರದಲ್ಲಿ ಸೇನೆಯ ವಿವಿಧ ಪಡೆಗಳ ನಡುವೆ ಸಮಾನತೆಯ ಕೊರತೆಯಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕಾರ್ಯಾಚರಣೆಯ ವೇಳೆ (ಎನ್‌ಕೌಂಟರ್, ಗುಂಡಿನ ಚಕಮಕಿ ಇತ್ಯಾದಿ) ಅಸುನೀಗಿದ ಎಲ್ಲ ಅರೆಸೇನಾಪಡೆಗಳ ಯೋಧರ ಕುಟುಂಬಗಳಿಗೂ ತಲಾ 35 ಲಕ್ಷ ರೂ.ಗಳನ್ನು ಹಂತ ಹಂತವಾಗಿ ನೀಡಲು ನಿರ್ಧರಿಸಲಾಗಿದೆ.
2021ರ ನವೆಂಬರ್ 1ರಿಂದಲೇ ಈ ನೆರವು ಅನ್ವಯವಾಗಲಿದೆ. ಬೇರೆ ಕಾರಣಗಳಿಂದ ಅಸುನೀಗಿದ ಯೋಧರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮೊತ್ತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.
ಇದನ್ನೂ ಓದಿ:ಬೆಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಕೆಶಿ
ಪರಿಹಾರ ಮೊತ್ತದಲ್ಲಿನ ವ್ಯತ್ಯಾಸಗಳ ಬಗ್ಗೆ ಹುತಾತ್ಮರ ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರಕಾರವು ಎಲ್ಲರಿಗೂ ಏಕರೂಪದ ಮೊತ್ತವನ್ನು ಪರಿಹಾರದ ರೂಪದಲ್ಲಿ ನೀಡುವ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಹಿಂದೆ ಎಲ್ಲ ಅರೆಸೇನಾಪಡೆಗಳ ರಿಸ್ಕ್ ಫಂಡ್ ಮೊತ್ತವು ಭಿನ್ನ ಭಿನ್ನವಾಗಿತ್ತು. ಸಿಆರ್‌ಪಿಎಫ್ ನಲ್ಲಿ ಈ ಮೊತ್ತವನ್ನು 21.5 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿತ್ತು. ಅದೇ ರೀತಿ, ಸಿಐಎಸ್‌ಎಫ್ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 15 ಲಕ್ಷ ರೂ.ಗೆ, ಐಟಿಬಿಪಿ ಯೋಧರಿಗೆ 25 ಲಕ್ಷ ರೂ.ಗೆ ಹೆಚ್ಚಿಸಲಾಗಿತ್ತು.
ಒಟ್ಟಿನಲ್ಲಿ ಕಳೆದ 6 ವರ್ಷಗಳಲ್ಲಿ ಆರ್ಥಿಕ ನೆರವಿನ ಮೊತ್ತವನ್ನು ಶೇ.75ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.