WFI Elections: ನನ್ನ ಕುಟುಂಬದವರು ಯಾರೂ ನಾಮಪತ್ರ ಸಲ್ಲಿಸುತ್ತಿಲ್ಲ: ಬ್ರಿಜ್ ಭೂಷಣ್
Team Udayavani, Jul 31, 2023, 5:00 PM IST
ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಗೆ ನಮ್ಮ ಕುಟುಂಬದವರು ನಾಮಪತ್ರ ಸಲ್ಲಿಸುತ್ತಿಲ್ಲ ಎಂದು ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ನನ್ನ ಕುಟುಂಬದಿಂದ ಯಾರೂ ನಾಮಪತ್ರ ಸಲ್ಲಿಸುತ್ತಿಲ್ಲ ಎಂದು ಹೇಳಿದ್ದಾರೆ.
ಬ್ರಿಜ್ ಭೂಷಣ್ ಅವರು ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ 25 ರಾಜ್ಯ ಕುಸ್ತಿ ಸಂಸ್ಥೆಗಳಲ್ಲಿ 22 ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಆಗಸ್ಟ್ 12 ರಂದು ನಡೆಯುವ ಫೆಡರೇಶನ್ ಚುನಾವಣೆಗೆ ವಿವಿಧ ಹುದ್ದೆಗಳಿಗೆ ತಮ್ಮ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಲಾಗುವುದು ಎಂದು ಹೇಳಿದ್ದರು.
#WATCH | Delhi: Former WFI president and BJP MP Brij Bhushan Sharan Singh says, “Today is the last day for filing of nominations for the federation’s elections (Wrestling Federation of India, WFI)…Nobody from my family is filing a nomination.” pic.twitter.com/J1dSNulZG1
— ANI (@ANI) July 31, 2023
ಡಬ್ಲ್ಯುಎಫ್‌ಐ ಚುನಾವಣೆಗೆ ನಾಮನಿರ್ದೇಶನದ ಕೊನೆಯ ದಿನವಾದ ಸೋಮವಾರ ಬ್ರಿಜ್ ಭೂಷಣ್ ಇಲ್ಲಿನ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಕಚೇರಿಗೆ ಭೇಟಿ ನೀಡಿದ್ದರು.
ಬ್ರಿಜ್‌ಭೂಷಣ್ ಈಗಾಗಲೇ 12 ವರ್ಷ ಅಧಿಕಾರ ಪೂರೈಸಿರುವ ಕಾರಣ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.