ಮುಂಬಯಿ ಆಕಾಶವಾಣಿಯಲ್ಲಿ ಕನ್ನಡಕ್ಕಿಲ್ಲ ಜಾಗ: ಆಕ್ರೋಶ
Team Udayavani, Nov 5, 2020, 6:11 AM IST
ಮುಂಬಯಿ: ಸುಮಾರು ಏಳು ದಶಕ ಗಳಿಗಿಂತಲೂ ಹೆಚ್ಚು ಕಾಲದಿಂದ ಕನ್ನಡ ಕಾರ್ಯ ಕ್ರಮಗಳನ್ನು ಪ್ರಸಾರ ಮಾಡುತ್ತಿದ್ದ ಮುಂಬಯಿ ಆಕಾಶವಾಣಿ ಸಂವಾದಿತ ವಾಹಿನಿಯಲ್ಲಿ ಏಕಾಏಕಿ ಕನ್ನಡ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ್ದು, ಮುಂಬಯಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕೊರೊನಾ ಮಹಾಮಾರಿಯಿಂದ ಮಾರ್ಚ್ ನಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್ ನಿಮಿತ್ತ ಸಂವಾದಿತ ಸ್ಟೇಷನ್‌ಗಳನ್ನು ಸ್ಥಗಿತಗೊಳಿಸಲಾಗಿತ್ತು. ಸೋಮವಾರ ದಿಂದ ಎಲ್ಲ ಸಂವಾದಿತ ಸ್ಟೇಷನ್‌ಗಳು ಮತ್ತೆ ಪುನರಾರಂಭಗೊಂಡಿವೆ. ಆದರೆ ಕನ್ನಡ ಮತ್ತು ಸಿಂಧಿ ಭಾಷಾ ಕಾರ್ಯಕ್ರಮಗಳನ್ನು ಕೈಬಿಟ್ಟು ಉಳಿದ ಭಾಷೆಗಳನ್ನು ಪ್ರಾರಂಭಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ವಾರದ ಅರ್ಧ ಗಂಟೆಗೂ ಕತ್ತರಿ
ಏಳು ದಶಕಗಳಿಗಿಂತಲೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಕನ್ನಡ ರೇಡಿಯೋ ಸ್ಟೇಷನ್‌ನಲ್ಲಿ ಒಂದು ಕಾಲದಲ್ಲಿ ದಿನಂಪ್ರತಿ ಪ್ರಸಾರ ವಾಗುತ್ತಿದ್ದ ಕಾರ್ಯಕ್ರಮಗಳು ಅನಂತರದ ದಿನಗಳಲ್ಲಿ ವಾರಕ್ಕೆ ಮೂರು ಸಲ, ಬಳಿಕ ವಾರಕ್ಕೆ ಎರಡು ಬಾರಿ, ಕ್ರಮೇಣ ಒಂದು ಗಂಟೆಗೆ ಇಳಿದರೆ, ಕೆಲವು ವರ್ಷಗಳಿಂದ ವಾರಕ್ಕೆ ಅರ್ಧ ಗಂಟೆಯ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದವು. ಪ್ರಸ್ತುತ ಅದನ್ನೂ ಸ್ಥಗಿತಗೊಳಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕನ್ನಡಿಗ ಅಧಿಕಾರಿಗಳು ಇಲ್ಲವಂತೆ…!
ಕಾರ್ಯಕ್ರಮ ವಿಭಾಗದಲ್ಲಿ ಕನ್ನಡ ಭಾಷೆಯ ಅರಿವಿರುವ ಅಧಿಕಾರಿಗಳು ಇಲ್ಲದ ಕಾರಣ ಕನ್ನಡ ರೇಡಿಯೋ ಸ್ಟೇಷನ್ ಮುಚ್ಚಲಾಗಿದೆ ಎಂದು ಮುಂಬಯಿ ಆಕಾಶವಾಣಿ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಈ ಹೇಳಿಕೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಯಾಕೆಂದರೆ ಈ ಹಿಂದೆ ಕನ್ನಡ ಬಾರದ ಅಧಿಕಾರಿಗಳು ಈ ವಿಭಾಗವನ್ನು ನೋಡಿಕೊಳ್ಳುತ್ತಿದ್ದ ನಿದರ್ಶನಗಳು ಹಲವಾರಿವೆ.
ಕನ್ನಡಿಗರ ಆಕ್ರೋಶ
ಕನ್ನಡ ಕಾರ್ಯಕ್ರಮವನ್ನು ನಿಲ್ಲಿಸಿರುವ ಕುರಿತಂತೆ ಉದಯವಾಣಿ ಮುಂಬಯಿ ಆವೃತ್ತಿಯಲ್ಲಿ ಬುಧವಾರ ವರದಿ ಪ್ರಕಟವಾಗಿದ್ದು, ಕನ್ನಡಿಗರು ಆಕಾಶವಾಣಿಯ ನಿರ್ಧಾರ ಕುರಿತಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಹಿತಿಗಳು, ರಾಜಕಾರಣಿಗಳು ಕೂಡ ಕನ್ನಡ ಕಾರ್ಯಕ್ರಮ ಪುನರಾರಂಭಕ್ಕೆ ಆಗ್ರಹಿಸಿದ್ದಾರೆ.
ಮುಂಬಯಿ ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ಕಾರ್ಯಕ್ರಮ ನಿಲ್ಲಿಸುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಅಧಿಕಾರಿಗಳ ಜತೆ ಚರ್ಚಿಸಿ ಕಾರ್ಯಕ್ರಮ ಪುನಾರಂಭಿಸಬೇಕೆಂದು ಒತ್ತಾಯಿಸುತ್ತೇನೆ.
– ಸಿ.ಟಿ. ರವಿ, ಕನ್ನಡ ಮತ್ತು ಸಂಸ್ಕೃತಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.