ನಾವು ಅಧಿಕಾರಕ್ಕೆ ಬಂದರೆ,ಜನರ ಅನುಮತಿಯಿಲ್ಲದೆ ಯಾವ ಯೋಜನೆಯನ್ನು ಜಾರಿಗೆ ತರಲ್ಲ: ಕೇಜ್ರಿವಾಲ್
Team Udayavani, Dec 18, 2021, 5:36 PM IST
ಪಣಜಿ: ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನತೆಯ ಅನುಮತಿಯ ಹೊರತು ಯಾವುದೇ ಯೋಜನೆಗಳನ್ನು ಜಾರಿಗೆ ತರಲಾಗುವುದಿಲ್ಲ. ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಮೂರು ಯೋಜನೆಗಳು ರಾಜ್ಯದ ಜನತೆಗೆ ಬೇಡವಾಗಿದೆ. ಆದರೆ ಕೆಲವು ದೊಡ್ಡ ಉದ್ಯೋಗಿಗಳಿಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಗೋವಾದಲ್ಲಿ ಈ ಮೂರು ಯೋಜನೆಗಳನ್ನು ಜಾರಿಗೆ ತಂದಿದೆ ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಆಮ್ ಆದ್ಮಿ ಪಕ್ಷವೊಂದೇ ಪರ್ಯಾಯವಾಗಿದೆ. ಗೋವಾದಲ್ಲಿ ಜನತೆಗೆ ಯೋಗ್ಯ ಸರ್ಕಾರವನ್ನು ಆಮ್ ಆದ್ಮಿ ಪಕ್ಷ ಮಾತ್ರ ನೀಡಬಲ್ಲದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನುಡಿದರು,
ವಾಸ್ಕೊದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕಿ ಎಲಿನಾ ಸಾಲ್ಡಾನಾ ರವರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮಾತಾನಾಡಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಎಲಿನಾ ಸಾಕ್ಡಾನಾ ಮಾತನಾಡಿ, ಈ ದಿನ ನನಗೆ ಅತ್ಯಂತ ಮಹತ್ವದ ದಿನವಾಗಿದೆ. ಸರ್ವಸಾಮಾನ್ಯ ಪಕ್ಷ ಯಾವುದಾದರೂ ಇದ್ದರೆ ಅದು ಆಮ್ ಆದ್ಮಿ ಪಕ್ಷವಾಗಿದೆ. ಮಾಜಿ ಮುಖ್ಯಮಂತ್ರಿ ದಿ. ಬಿಜೆಪಿಯಲ್ಲಿ ಮನೋಹರ್ ಪರೀಕರ್ ರವರು ಇದ್ದ ಸಂದರ್ಭದಲ್ಲಿದ್ದ ಪಕ್ಷದ ತತ್ವ ಸಿದ್ಧಾಂತಗಳು ಅಂದಿನಂತೆ ಉಳಿದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.