ನಿವೃತ್ತಿ ವಯೋಮಿತಿ ಹೆಚ್ಚಳ ಆದೇಶ ಹಿಂಪಡೆದ ಕೇರಳ ಸರ್ಕಾರ
Team Udayavani, Nov 2, 2022, 8:45 PM IST
ತಿರುವನಂತಪುರ: ರಾಜ್ಯ ಸರ್ಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವವರ ನಿವೃತ್ತಿ ವಯೋಮಿತಿಯನ್ನು 60 ವರ್ಷಕ್ಕೆ ಹೆಚ್ಚಿಸಿದ್ದ ಆದೇಶವನ್ನು ಕೇರಳ ಸರ್ಕಾರ ವಾಪಸ್ ಪಡೆದಿದೆ.
ಕಳೆದ ವಾರವಷ್ಟೇ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದ ಔಚಿತ್ಯವನ್ನು ಕಾಂಗ್ರೆಸ್ ನೇತೃತ್ವದ ಯುಡಿಎಫ್, ಬಿಜೆಪಿ ಆಕ್ಷೇಪ ಮಾಡಿದ್ದವು.
ಈ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಸಂಪುಟ ಸಭೆ ನಡೆದು, ವಯೋಮಿತಿ ಹೆಚ್ಚಳ ಆದೇಶವನ್ನು ವಾಪಸ್ ಪಡೆದುಕೊಳ್ಳಲು ನಿರ್ಧರಿಸಲಾಗಿದೆ.
ನಿವೃತ್ತಿ ವಯೋಮಿತಿ ಏರಿಕೆ ರಾಜ್ಯದ ಉದ್ಯೋಗಾಕಾಂಕ್ಷಿ ಯುವಕರಿಗೆ ಮಾಡಿದ ಮೋಸ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.