![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 28, 2024, 9:28 PM IST
ಹೊಸದಿಲ್ಲಿ: ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯನ್ನು ನಾಲ್ಕು ದಿನ ಏಪ್ರಿಲ್ 1 ರವರೆಗೆ ವಿಸ್ತರಿಸಿದೆ. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಇಡಿ 7 ದಿನಗಳ ವಿಸ್ತರಣೆಯನ್ನು ಕೋರಿತ್ತು.
ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ‘ಸರಕಾರ ಜೈಲಿನಿಂದ ನಡೆಸಲು ಸಾಧ್ಯವಿಲ್ಲ’ ಎಂಬ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ “ಇದು ರಾಜಕೀಯ ಪಿತೂರಿ. ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ’ ಎಂದರು.
ಸಿಎಂ ಹುದ್ದೆಯಿಂದ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.ರಾಷ್ಟ್ರ ರಾಜಧಾನಿಯಲ್ಲಿನ ಸಾಂವಿಧಾನಿಕ ಯಂತ್ರದ ಸ್ಥಗಿತವನ್ನು ಘೋಷಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತು.
ಗೋವಾ ಆಪ್ ನಾಯಕರ ವಿಚಾರಣೆ
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ.) ಗುರುವಾರ ಗೋವಾ ಆಪ್ ಘಟಕದ ಅಧ್ಯಕ್ಷ ಅಮಿತ್ ಪಾಳೇಕರ್ ಹಾಗೂ ಇತರ ಮೂವರನ್ನು ವಿಚಾರಣೆ ಗೊಳಪಡಿಸಿದೆ. ಪಾಳೇಕರ್ ಜತೆಗೆ ಆಪ್ ನಾಯಕ ರಾಮರಾವ್ ವಾಘ ಮತ್ತು ಇತರ ಇಬ್ಬರಿಗೆ ಇ.ಡಿ. ಸಮನ್ಸ್ ನೀಡಿತ್ತು. ಕೇಜ್ರಿವಾಲ್ ಸೇರಿದಂತೆ ಇತರರು ಬಂಧಿತರಾಗಿರುವ ದಿಲ್ಲಿ ಅಬಕಾರಿ ನೀತಿ ಹಗರಣ ಸಂಬಂಧ ಇವರನ್ನು ವಿಚಾರಣೆ ನಡೆಸಲಾಗಿದೆ.
ಕೇಜ್ರಿಗೆ ಕಿರುಕುಳ: ಪತ್ನಿ ಸುನೀತಾ ಆರೋಪ
ಕೇಜ್ರಿವಾಲ್ ಆರೋಗ್ಯ ಸರಿಯಿಲ್ಲ. ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಆರೋಪಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಆಗಮಿಸಿದ್ದ ಸುನೀತಾ ಅವರು, ಕೇಜ್ರಿವಾಲ್ ಆರೋಗ್ಯ ಸರಿಯಿಲ್ಲ. ಅವರ ದೇಹ ದಲ್ಲಿ ಸಕ್ಕರೆ ಅಂಶ ಹೆಚ್ಚು ಕಡಿಮೆಯಾಗುತ್ತಿದೆ. ಅವರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದೆ. ಈ ದೌರ್ಜನ್ಯ ನಿಲ್ಲುವಂತೆ ಕಾಣುತ್ತಿಲ್ಲ. ಜನರು ತಕ್ಕ ಉತ್ತರ ನೀಡಲಿದ್ದಾರೆಂದು ಹೇಳಿದರು.
ಭಾರತದ ಕಟು ಆಕ್ಷೇಪಕ್ಕೆ ಮೆತ್ತಗಾದ ಜರ್ಮನಿ, ಅಮೆರಿಕ
ಕೇಜ್ರಿವಾಲ್ ಬಂಧನ ಸಂಬಂಧ ಅನಾವಶ್ಯಕವಾಗಿ ಭಾರತದ ವ್ಯವಹಾರದಲ್ಲಿ ಮೂಗು ತೂರಿಸಿದ್ದ ಜರ್ಮನಿ ಈಗ ತನ್ನ ಮಾತಿನ ಧಾಟಿಯನ್ನು ಬದಲಿಸಿದೆ. ಭಾರತೀಯ ಸಂವಿಧಾನವು ಮಾನವನ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕೆ ಖಾತ್ರಿ ಒದಗಿಸುತ್ತದೆ. ಏಷ್ಯಾದಲ್ಲಿ ಪ್ರಮುಖ ಪಾಲುದಾರ ರಾಷ್ಟ್ರವಾಗಿರುವ ಭಾರತ ಹಾಗೂ ನಾವು ಒಂದೇ ತೆರನಾದ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಎಂದು ಜರ್ಮನಿ ವಿದೇಶಾಂಗ ವಕ್ತಾರರು ತಿಳಿಸಿದ್ದಾರೆ. ಭಾರ ತವು ಜರ್ಮನಿ ವಿದೇ ಶಾಂಗ ವಕ್ತಾರರಿಗೆ ಸಮನ್ಸ್ ನೀಡಿ, ಪ್ರತಿರೋಧ ಸಲ್ಲಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆ ದಿದೆ. ಇದೇ ವೇಳೆ ಕೇಜ್ರಿವಾಲ್ ಬಂಧನ ಸಂಬಂಧ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತವು ಅಮೆರಿಕದ ಹಿರಿಯ ಅಧಿಕಾರಿಯನ್ನು ಕರೆಯಿಸಿಕೊಂಡು ತನ್ನ ವಿರೋಧವನ್ನು ದಾಖಲಿಸಿತ್ತು. ಆ ಬಳಿಕ ಅಮೆರಿಕ ಕೂಡ, ಭಾರತೀಯ ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದು ಹೇಳಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.