ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್‌ಶಿಪ್ ಇಲ್ಲ
9, 10ನೇ ತರಗತಿ ಮಕ್ಕಳಿಗಷ್ಟೇ ವಿದ್ಯಾರ್ಥಿವೇತನ
Team Udayavani, Nov 28, 2022, 7:00 PM IST
ಲಕ್ನೋ: ಉತ್ತರಪ್ರದೇಶದ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಇನ್ನು ಮುಂದೆ ಸ್ಕಾಲರ್‌ಶಿಪ್‌ಗೆ ಅರ್ಜಿ ಹಾಕುವಂತಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಈವರೆಗೆ ಬೇರೆ ಬೇರೆ ಕೋರ್ಸ್‌ಗಳಿಗೆ ಅನುಗುಣವಾಗಿ 1ರಿಂದ 5ನೇ ತರಗತಿವರೆಗಿನ ಮದರಸಾ ವಿದ್ಯಾರ್ಥಿಗಳಿಗೆ 1 ಸಾವಿರ ರೂ.ಗಳ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು. ಕಳೆದ ವರ್ಷ 16.558 ಮದರಸಾಗಳ 5 ಲಕ್ಷದಷ್ಟು ಮಕ್ಕಳು ಈ ಸ್ಕಾಲರ್‌ಶಿಪ್ ಪಡೆದಿದ್ದರು.
ಆದರೆ, ಈಗ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರ, “1ರಿಂದ 8ರವರೆಗಿನ ಶಿಕ್ಷಣವನ್ನು ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತವಾಗಿ ಒದಗಿಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಮತ್ತು ಪುಸ್ತಕಗಳೂ ಉಚಿತವಾಗಿ ನೀಡಲಾಗುತ್ತಿದೆ.
ಹೀಗಿರುವಾಗ, ವಿದ್ಯಾರ್ಥಿವೇತನ ನೀಡಬೇಕಾದ ಅಗತ್ಯವಿಲ್ಲ’ ಎಂದಿದೆ. ಕೇವಲ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.