ಲಸಿಕೆ ಸುರಕ್ಷಿತ, ಸಂತಾನೋತ್ಪತ್ತಿಗೆ ಯಾವುದೇ ಸಮಸ್ಯೆ ಇಲ್ಲ : ಕೇಂದ್ರ ಆರೋಗ್ಯ ಸಚಿವಾಲಯ
Team Udayavani, Jun 30, 2021, 9:00 PM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ಕೋವಿಡ್ ಲಸಿಕೆಯನ್ನು ಪಡೆದರೇ, ಸಂತಾನೋತ್ಪತ್ತಿಗೆ ಸಮಸ್ಯೆಯಾಗುತ್ತದೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಇದಕ್ಕೆ ಯಾವುದೇ ರೀತಿಯ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲಎಂದು ಹೇಳಿದೆ.
ಲಸಿಕೆ ಪಡೆಯುವುದರಿಮದ ಯಾವುದೇ ರೀತಿಯಲ್ಲಿ ಸಮಸ್ಯೆಗಳು ಆಗುವುದಿಲ್ಲ. ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿವೆ ಎಂದು ಸ್ಪಷ್ಟಪಡಿಸಿದೆ.
ಇನ್ನು, ಎದೆ ಹಾಲುಣಿಸುವ ಮಹಿಳೆಯರೂ ಕೂಡ ಲಸಿಕೆಯನ್ನು ಯಾವುದೇ ಭೀತಿ ಇಲ್ಲದೇ ಪಡೆದುಕೊಳ್ಳಬಹುದೆಂದು ಕೋವಿಡ್–19 ಲಸಿಕೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ತಂಡ (ಎನ್ ಇ ಜಿ ವಿ ಎ ಸಿ) ಶಿಫಾರಸು ಮಾಡಿದೆ.
ಇದನ್ನೂ ಓದಿ : 6 ತಿಂಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕ : ಅಶ್ವತ್ಥನಾರಾಯಣ
ಸಂತಾನೋತ್ಪತ್ತಿಗೆ ಸಮಸ್ಯೆಯಾಗುತ್ತದೆ ಎಂಬ ವರದಿಗಳು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಿಗೆ ಆರೋಗ್ಯ ಸಚಿವಾಲಯ ಈ ಸ್ಪಷ್ಟಪಡಿಸಿದೆ.
ಇನ್ನು, ಲಸಿಕೆ ಹಾಕಿಸಿಕೊಳ್ಳುವುದರಿಂದ ಸಂತಾನೋತ್ಪತ್ತಿಗೆ ಸಮಸ್ಯೆಗೆ ಕಾರಣವಾಗುತ್ತದೆ ಎನ್ನುವುದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ ಎಂಬ ವಿಚಾರವನ್ನು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕೃತ ವೆಬ್ ಸೈಟ್ ನಲ್ಲಿನ ಪ್ರಶ್ನೋತ್ತರದಲ್ಲೂ ತಿಳಿಸಲಾಗಿದ್ದು, ಎಲ್ಲಾ ಕೋವಿಡ್ ಲಸಿಕೆಗಳನ್ನು ಮೊದಲು ಪ್ರಾಣಿಗಳ ಮೇಲೆ ಪ್ರಾಯೋಗಿಕವಾಗಿ ಪರೀಕ್ಷೆ ಮಾಡಿದ ಮೇಲೆ ಮನುಷ್ಯರ ಮೇಲೆ ಪರೀಕ್ಷೆ ನಡೆಸಲಾಗಿದೆ. ಲಸಿಕೆಯಿಂದ ಯಾವುದಾದರೂ ಅಡ್ಡಪರಿಣಾಮಗಳು ಬೀರುತ್ತವೆಯೇ ಎನ್ನುವುದನ್ನು ಕೂಡ ಅಧ್ಯಯನ ಮಾಡಲಾಗಿದೆ. ಲಸಿಕೆ ಸುರಕ್ಷಿತವಾಗಿದೆ ಎನ್ನುವುದನ್ನು ಸಾಬೀತುಪಡಿಸಿದ ಬಳಿಕವೇ ಬಳಸಲು ಅಧಿಕೃತ ಒಪ್ಪಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ : ಮಂಡ್ಯ : ಕಟುಕರ ಕೈಯಿಂದ ರಕ್ಷಿಸಲ್ಪಟ್ಟ 11 ಒಂಟೆಗಳು ಮರಳಿ ರಾಜಸ್ಥಾನಕ್ಕೆ ವಾಪಾಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.