ರಾತ್ರಿ ವೇಳೆ ಎಸ್ಸೆಮ್ಮೆಸ್‌, ಕರೆ ಮಾಡುವಂತಿಲ್ಲ; ಚುನಾವಣಾ ಆಯೋಗ

Team Udayavani, Oct 13, 2018, 6:00 AM IST

s-7.jpg

ಹೊಸದಿಲ್ಲಿ /ಭೋಪಾಲ್‌/ಐಜ್ವಾಲ್‌: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ‌, ತೆಲಂಗಾಣ, ಮಿಜೋರಾಂಗಳಲ್ಲಿ ವಿಧಾನಸಭೆ ಚುನಾವಣೆಗೆ ಸಾಮಾಜಿಕ ಜಾಲತಾಣಗಳ ಮೂಲಕವೂ ಪ್ರಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅದರ ಮೇಲೆ ನಿಯಂತ್ರಣ ಹೇರಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅಭ್ಯರ್ಥಿಗಳು ಪ್ರಚಾರ ಮಾಡುವುದು, ಮತದಾರರಿಗೆ ಸಂದೇಶ ಕಳುಹಿಸುವುದು, ಕರೆ ಮಾಡುವುದು, ವಾಟ್ಸ್‌ ಆ್ಯಪ್‌ ಮೆಸೇಜ್‌ ಕಳುಹಿಸುವುದು ಮಾಡುವಂತಿಲ್ಲ ಎಂದು ಆದೇಶ ನೀಡಿದೆ. ಸಾರ್ವಜನಿಕರ ಖಾಸಗಿತನ ರಕ್ಷಿಸುವ ಹಾಗೂ ಕಿರಿಕಿರಿ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯ. ಮನೆ ಮನೆ ಪ್ರಚಾರ, ಧ್ವನಿವರ್ಧಕ ಪ್ರಚಾರಕ್ಕೂ ಇದೇ ನಿಯಮ ಅನ್ವಯ ಎಂದು ಆಯೋಗ ಹೇಳಿದೆ ಎಂದು “ದ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ತೆಷಮಯ ವಾತಾವರಣಕ್ಕೆ ಪ್ರೋತ್ಸಾಹ ನೀಡುವ ಯಾವುದೇ ಅಂಶಗಳನ್ನೂ ಪ್ರಸಾರ ಮಾಡುವಂತಿಲ್ಲ. ಸಾರ್ವಜನಿಕ ಶಾಂತಿ ಭಂಗ, ಅವಹೇಳನಕಾರಿ ಅಂಶಗಳನ್ನು ಮುದ್ರಿಸುವಂತಿಲ್ಲ ಮತ್ತು ಪ್ರಸಾರ ಮಾಡುವಂತಿಲ್ಲ ಎಂದಿದೆ ಆಯೋಗ.  

ಮನವೊಲಿಕೆಗೆ ಸಾಮಾಜಿಕ ಜಾಲತಾಣ: ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಲು ಪ್ರೋತ್ಸಾಹಿಸಲು ಜಿಲ್ಲಾಡಳಿತ ಸಾಮಾಜಿಕ ಜಾಲತಾಣಗಳ ಬಳಕೆ ಮಾಡಲಿದೆ. ಅದರ ಮೂಲಕ ಒಟ್ಟು ಮತದಾರರ ಶೇ.30ರಷ್ಟು ಮಂದಿಯನ್ನು ತಲುಪಲು ಅವಕಾಶವಿದೆ. ವಾರಕ್ಕೊಮ್ಮೆ ಮತದಾನದ ಮಹತ್ವದ ಬಗೆಗಿನ ಸಂದೇಶ ಕಳುಹಿಸಲಾಗುತ್ತದೆ.

ಮಾಸಾಂತ್ಯಕ್ಕೆ ಮೊದಲ ಪಟ್ಟಿ?: ಮಧ್ಯಪ್ರದೇಶ ಚುನಾವಣೆಗಾಗಿ ಅ.25ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಮುಖಗಳನ್ನು ಕಣಕ್ಕೆ ಇಳಿಸಲು ಬಿಜೆಪಿ ಮುಂದಾಗಿದೆ. ರಾಜ್ಯದಲ್ಲಿ ಚುನಾವಣಾ ಹೊಣೆ ಹೊತ್ತಿರುವ ನರೇಂದ್ರ ಸಿಂಗ್‌ ತೋಮರ್‌ ಪಕ್ಷದ ವರಿಷ್ಠರ ಜತೆಗೆ ಸಮಾಲೋಚನೆ ನಡೆಸಿದ್ದಾರೆ.

ಚುನಾವಣೆ ಪ್ರಚಾರದಲ್ಲಿ ಕವಿ ಉತ್ಸವ, ಫ್ಯಾಷನ್‌ ಶೋ: ಉತ್ಸವಗಳಲ್ಲಿ ಕವಿ ಸಮ್ಮೇಳನ ನಡೆಯುವುದು ಕ್ರಮ. ಇದೀಗ ಮಧ್ಯಪ್ರದೇಶದ ಚುನಾವಣಾ ಅಖಾಡದಲ್ಲಿಯೂ ಕವಿ ಸಮ್ಮೇಳನ ನಡೆಯುತ್ತಿವೆ. ಇಷ್ಟು ಮಾತ್ರವಲ್ಲ ಫ್ಯಾಷನ್‌ ಶೋ, ಸಿನಿಮಾ ಪ್ರದರ್ಶನ, ಆತ್ಮರಕ್ಷಣಾ ಕಲೆಯ ಶಿಬಿರಗಳ ಮೂಲಕ ಇಂದೋರ್‌ ಮತ್ತು ಉಜ್ಜೆ„ನಿಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಪ್ರದೇಶದ 53 ಲಕ್ಷ ಮತದಾರರ ಪೈಕಿ ಶೇ.56.09 ಮಂದಿ 18-39 ವಯೋಮಾನದವರು. ಅವರನ್ನು ಆಕರ್ಷಿಸಲು ಈ ರೀತಿಯ ತಂತ್ರ ನಡೆಸಲಾಗುತ್ತಿದೆ. ಇದರ ಜತೆಗೆ ಹಲವು ಶಾಸಕರು ಯುವ ಮತದಾರರ ಮನ ಗೆಲ್ಲಲು ಆ್ಯಪ್‌ಗ್ಳನ್ನೂ ಅಭಿವೃದ್ಧಿಪಡಿಸಿದ್ದಾರೆ.

200 ಸ್ಥಾನಗಳಲ್ಲಿ  ಎನ್‌ಸಿಪಿ ಸ್ಪರ್ಧೆ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಮಿತ್ರ ಪಕ್ಷ ಎನ್‌ಸಿಪಿ 200 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಹೇಳಿದೆ. ಪಕ್ಷದ ಹಿರಿಯ ನಾಯಕ ರಾಜೇಂದ್ರ ಜೈನ್‌ ಈ ಮಾಹಿತಿ ನೀಡಿದ್ದಾರೆ. ಜತೆಗೆ ಚುನಾವಣಾ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದಾರೆ. 

ಕಮಲ್‌, ಪೈಲಟ್‌ ಮನವಿ ತಿರಸ್ಕೃತ: ಮಧ್ಯಪ್ರದೇಶ, ರಾಜಸ್ಥಾನದಲ್ಲಿನ ಮತದಾರರ ಕ‌ರಡು ಪ್ರತಿ ನೀಡುವಂತೆ ಕಾಂಗ್ರೆಸ್‌ ನಾಯಕರಾದ ಕಮಲ್‌ನಾಥ್‌, ಸಚಿನ್‌ ಪೈಲಟ್‌ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಮಧ್ಯಪ್ರದೇಶದಲ್ಲಿ 60 ಲಕ್ಷ, ರಾಜಸ್ಥಾನದಲ್ಲಿ 41 ಲಕ್ಷ ನಕಲಿ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಮಿಜೋರಾಂನಲ್ಲಿ ಕಾಂಗ್ರೆಸ್‌ಗೆ ಕಠಿಣ ಹಾದಿ
ಮಿಜೋರಾಂನಲ್ಲಿ ಸದ್ಯ ಕಾಂಗ್ರೆಸ್‌ ಅಧಿಕಾರದಲ್ಲಿದೆ. ಇದರ ಹೊರತಾಗಿಯೂ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಾಹಸ ಪಡುತ್ತಿದೆ. ಮಾಜಿ ಸಚಿವರಾದ  ಆರ್‌.ಲಾಝಿಲಿಯಾನಾ, ಲಾರ್ಲಿನಿಯಾನಾ ಸೈಲೋ ಅವರು ಸಿಎಂ ಲಾಲ್ತನ್‌ ಹಾವ್ಲಾ ಜತೆಗಿನ ಭಿನ್ನಾಭಿಪ್ರಾಯದಿಂದ ಪಕ್ಷ ತೊರೆದಿದ್ದಾರೆ. 40 ಮಂದಿ ಸದಸ್ಯರ ವಿಧಾನಸಭೆಗೆ ನ.28ರಂದು ಚುನಾವಣೆ ನಡೆಯಲಿದೆ. ಮಿಜೋ ನ್ಯಾಷನಲ್‌ ಫ್ರಂಟ್‌ ಬಿಜೆಪಿ ಜತೆಗೆ ಗುರುತಿಸಿಕೊಂಡಿದೆ. 

ಮೋದಿ ವಿರುದ್ಧ ಶತ್ರುಘ್ನ ಸಿನ್ಹಾ ಸ್ಪರ್ಧೆ?
ಬಿಜೆಪಿಯಲ್ಲಿ ಭಿನ್ನಮತೀಯ ನಾಯಕ ಎಂದು ಗುರುತಿಸಿಕೊಂಡಿರುವ ಲೋಕಸಭಾ ಸದಸ್ಯ ಶತ್ರುಘ್ನ ಸಿನ್ಹಾ, 2019ರ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ವೇಳೆ ಅವರು ಬಿಜೆಪಿ ತೊರೆದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. ಬಿಹಾರಕ್ಕೆ ಸಮೀಪದ ಪೂರ್ವ ಉತ್ತರ ಪ್ರದೇಶದ ನಗರ ವಾರಾಣಸಿಯಲ್ಲಿ ಸಿನ್ಹಾ ಅವರ ಕಾಯಸ್ಥ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ವೇಳೆ 2014ರ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೆಂಬಲ ನೀಡಿದಂತೆ ಮುಂದಿನ ಚುನಾವಣೆಯಲ್ಲಿ ಬೆಂಬಲ ನೀಡಬೇಕೇ ಎಂಬ ಬಗ್ಗೆ ಮಾತುಕತೆಗಳು ಶೀಘ್ರದಲ್ಲಿಯೇ ನಡೆಯಲಿವೆ.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.