ದೇಶಾದ್ಯಂತ ಎನ್.ಆರ್.ಸಿ. ಸದ್ಯಕ್ಕಿಲ್ಲ : ಕೇಂದ್ರ ಗೃಹ ಸಚಿವ ಅಮಿತ್ ಶಾ ಯೂ ಟರ್ನ್
Team Udayavani, Dec 24, 2019, 8:31 PM IST
ನವದೆಹಲಿ: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಆರ್.ಸಿ.ಯನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೇಂದ್ರ ಸರಕಾರ ಸ್ವಲ್ಪ ತಣ್ಣಗಾದಂತೆ ತೋರುತ್ತಿದೆ. ಸಿಎಎ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್.ಆರ್.ಸಿ.ಯನ್ನು ದೇಶವ್ಯಾಪಿ ಜಾರಿಗೊಳಿಸುವ ವಿಚಾರದಲ್ಲಿ ಮಾತ್ರ ಯೂಟರ್ನ್ ಹೊಡೆದಿದ್ದಾರೆ.
ಇದಕ್ಕೂ ಮೊದಲು ಎನ್.ಆರ್.ಸಿ.ಯನ್ನು ರಾಷ್ಟ್ರಾದ್ಯಂತ ಜಾರಿಗೊಳಿಸಿಯೇ ಸಿದ್ಧ ಎಂದು ಹೇಳುತ್ತಿದ್ದ ಅಮಿತ್ ಶಾ ಅವರು ಇಂದು ತನ್ನ ಹೇಳಿಕೆಯನ್ನು ಬದಲಿಸಿದ್ದಾರೆ. ಎನ್.ಆರ್.ಸಿ. ಜಾರಿ ಕುರಿತಾಗಿ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲದಿರುವ ಕಾರಣದಿಂದ ಈ ಕುರಿತಾಗಿ ಸದ್ಯಕ್ಕೆ ಮಾತುಕತೆಗಳನ್ನು ನಡೆಸುವುದು ಸಮಂಜಸವಲ್ಲ ಎಂದು ಅವರು ಎ.ಎನ್.ಐ. ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
#WATCH HM Amit Shah to ANI on Kerala and West Bengal say no to NPR: I humbly appeal to both Chief Ministers again, that don’t take such a step and please review you decisions, don’t keep the poor out of development programs just for your politics. pic.twitter.com/DaomdBQTdR
— ANI (@ANI) December 24, 2019
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆದಿತ್ಯವಾರದಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಧನ್ಯವಾದ ಸಮಾವೇಶದಲ್ಲಿ ಮಾತನಾಡುತ್ತಾ ಎನ್.ಆರ್.ಸಿ. ಹಾಗೂ ಡಿಟೆನ್ಷನ್ ಕ್ಯಾಂಪ್ ಗಳ ಕುರಿತಾಗಿ ಪ್ರತಿಪಕ್ಷಗಳು ದೇಶದ ಜನರಲ್ಲಿ, ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಸಮುದಾಯದವರಲ್ಲಿ ಅನಗತ್ಯ ಭೀತಿಯನ್ನು ಹುಟ್ಟುಹಾಕುತ್ತಿವೆ ಎಂದು ಕಿಡಿ ಕಾರಿದ್ದರು. ಮಾತ್ರವಲ್ಲದೇ ಸಿಎಎ ಮತ್ತು ಎನ್.ಆರ್.ಸಿ.ಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಪ್ರಧಾನಿ ಅವರು ಈ ಸಮಾವೇಶದಲ್ಲಿ ಹೇಳಿದ್ದರು.
ಪ್ರಧಾನಿ ಅವರ ಈ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪವನ್ನು ವ್ಯಕ್ತಪಡಿಸಿದ್ದವು. ಒಂದು ಕಡೆಯಲ್ಲಿ ಗೃಹಸಚಿವ ಅಮಿತ್ ಶಾ ಅವರು ದೇಶಾದ್ಯಂತ ಎನ್.ಆರ್.ಸಿ.ಯನ್ನು ಜಾರಿಗೊಳಿಸಿಯೇ ಸಿದ್ಧ ಎಂದು ತಮ್ಮ ಎಲ್ಲಾ ಭಾಷಣಗಳಲ್ಲಿ ಮತ್ತು ಸಂದರ್ಶನಗಳಲ್ಲಿ ಹೇಳಿಕೊಂಡು ಬರುತ್ತಿದ್ದಾರೆ. ಮತ್ತು ಶಾ ಅವರು ಸಂಸತ್ತಿನಲ್ಲೂ ಈ ಕುರಿತು ಪ್ರಸ್ತಾಪಿಸಿದ್ದರು ಎಂದು ಪ್ರತಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು.
ಪ್ರತಿಪಕ್ಷಗಳ ಈ ಆರೋಪಕ್ಕೆ ಉತ್ತರವೆಂಬಂತೆ ಅಮಿತ್ ಶಾ ಅವರ ಈ ಹೇಳಿಕೆ ಮೂಡಿಬಂದಿದೆ. ‘ಪ್ರಧಾನಿ ಮೋದಿ ಅವರು ಹೇಳಿದ್ದು ಸರಿಯಾಗಿಯೇ ಇದೆ. ಎನ್.ಆರ್.ಸಿ. ಕುರಿತಾಗಿ ಕೇಂದ್ರ ಸಚಿವ ಸಂಪುಟದಲ್ಲಾಗಲೀ, ಸಂಸತ್ತಿನಲ್ಲಾಗಲೀ ಇದುವರೆಗೂ ಚರ್ಚೆಯೇ ನಡೆದಿಲ್ಲ’ ಎಂದು ಅಮಿತ್ ಶಾ ಅವರು ತಮ್ಮ ಸಂದರ್ಶನದಲ್ಲಿ ಹೇಳಿದ್ದಾರೆ.
ಇನ್ನು ನಾಗರಿಕರ ರಾಷ್ಟ್ರೀಯ ನೋಂದಣಿಗೂ (NRC), ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೂ (NPR) ಯಾವುದೇ ಸಂಬಂಧವಿಲ್ಲ ಎಂಬುದಾಗಿ ಅಮಿತ್ ಶಾ ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. 2020ರಲ್ಲಿ ಎನ್.ಪಿ.ಆರ್. ನಡೆಸುವುದಾಗಿ ಕೇಂದ್ರ ಸರಕಾರ ಇಂದು ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.