Noida; ಕಾರ್ ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ಗಲಾಟೆ; 6 ಜನರ ಬಂಧನ
Team Udayavani, Aug 27, 2024, 8:06 PM IST
ನೋಯ್ಡಾ: ಪಾರ್ಕಿಂಗ್ ವಿಚಾರಕ್ಕೆ ನೆರೆಹೊರೆಯ ಎರಡು ಮನೆಯವರು ಹೊಡೆದಾಡಿಕೊಂಡ ಘಟನೆ ನೋಯ್ಡಾದ ಸೆಕ್ಟರ್ 72ರಲ್ಲಿ ನಡೆದಿದೆ. ಮಾತಿನ ಚಕಮಕಿಯು ಬೆಳೆದು ಹಿಂಸಾತ್ಮಕ ರೂಪ ತಾಳಿ ವಾಹನದ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ (ಆ.26) ಸಂಜೆ ಈ ಘಟನೆ ನಡೆದಿದ್ದು, ಇಬ್ಬರು ಮಹಿಳೆಯರು ಸೇರಿ ಆರು ಮಂದಿ ಪೊಲೀಸರ ಅತಿಥಿಯಾಗಿದ್ದಾರೆ.
ಎರಡು ಪಾರ್ಟಿಗಳ ನಡುವೆ ಪಾರ್ಕಿಂಗ್ ಜಾಗದ ಬಗ್ಗೆ ವಾದದಿಂದ ಗಲಾಟೆ ಪ್ರಾರಂಭವಾಗಿದೆ. ಇವರ ಗಲಾಟೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಗುಂಪು ಕ್ರಿಕೆಟ್ ಬ್ಯಾಟ್ ಗಳು ಮತ್ತು ಕೋಲುಗಳನ್ನು ಹಿಡಿದು ಅಲ್ಲಿ ನಿಲ್ಲಿಸಿದ್ದ ಕೆಂಪು ಕಾರಿನ ಗಾಜುಗಳು ಮತ್ತು ಬಾಗಿಲುಗಳನ್ನು ಒಡೆದು ಹಾಕಿದೆ.
ಎರಡು ಗುಂಪಿನ ಮಹಿಳೆಯರು ಜೋರಾಗಿ ಗಲಾಟೆ ಮಾಡುತ್ತಿರುವುದನ್ನೂ ವಿಡಿಯೋದಲ್ಲಿ ಕಾಣಬಹುದು. ಘಟನೆಯ ಬಳಿಕ ಸೆಕ್ಟರ್ 113 ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ ಬಳಿಕ ಅಧಿಕಾರಿಗಳು ಗಲಾಟೆಯಲ್ಲಿ ಭಾಗಿಯಾಗಿರುವ ಎರಡೂ ಕಡೆಯವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.