ಮರುಪಾವತಿಯಾಗದ ಸಾಲ 71 ಸಾವಿರ ಕೋಟಿ
Team Udayavani, Jun 4, 2019, 6:00 AM IST
ಹೊಸದಿಲ್ಲಿ: ಮರುಪಾವತಿಯಾಗದ ಸಾಲದ ಪ್ರಮಾಣ 2018-19 ರಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ವರದಿ ಮಾಡಿದೆ. ಈ ಅವಧಿಯಲ್ಲಿ ಬ್ಯಾಂಕ್ ವಂಚನೆ 71,500 ಕೋಟಿ ರೂ.ಗೆ ತಲುಪಿದ್ದು, ಒಟ್ಟು ಪ್ರಕರಣಗಳು 6,801 ಆಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 73ರಷ್ಟು ಹೆಚ್ಚು ಎಂದು ಆರ್‌ಟಿಐ ಅಡಿಯಲ್ಲಿ ಕೇಳಲಾದ ಪ್ರಶ್ನೆಗೆ ಆರ್‌ಬಿಐ ಉತ್ತರಿಸಿದೆ. ಕಳೆದ 11 ವರ್ಷಗಳಲ್ಲಿ ಒಟ್ಟು 53,334 ಪ್ರಕರಣಗಳು ವರದಿಯಾಗಿದ್ದು, ಇದರ ಮೊತ್ತ ಒಟ್ಟು 2.04 ಲಕ್ಷ ಕೋಟಿ ರೂ. ಆಗಿತ್ತು.
ಉದ್ಯಮಿಗಳಾದ ವಿಜಯ್ ಮಲ್ಯ ಮತ್ತು ನೀರವ್ ಮೋದಿಯಂತಹವರು ಕೋಟ್ಯಂತರ ರೂ. ಸಾಲ ಪಡೆದು ಮರುಪಾವತಿ ಮಾಡದೇ ವಿದೇಶಕ್ಕೆ ಪಲಾಯನಗೈದ ಹಿನ್ನೆಲೆಯಲ್ಲೇ ವರ್ಷದಿಂದ ವರ್ಷಕ್ಕೆ ಮರುಪಾವತಿಯಾಗದ ಸಾಲದ ಪ್ರಮಾಣವೂ ಹೆಚ್ಚುತ್ತಿರುವುದು ಬ್ಯಾಂಕಿಂಗ್ ವ್ಯವಸ್ಥೆಗೆ ಆತಂಕಕಾರಿಯಾಗಿದೆ. ಈ ಪ್ರಮಾಣದಲ್ಲಿ ಅವ್ಯವಹಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರೀಯ ವಿಚಕ್ಷಣಾ ಆಯೋಗವು 100 ಪ್ರಕರಣಗಳ ವಿಶ್ಲೇಷಣೆ ನಡೆಸಿ ವರದಿಯನ್ನೂ ಸಲ್ಲಿಸಿದೆ.
ಆಭರಣ, ಉತ್ಪಾದನೆ ಮತ್ತು ಉದ್ಯಮ, ಕೃಷಿ, ಮಾಧ್ಯಮ, ವಿಮಾನ ಯಾನ, ಸೇವಾ ವಲಯ ಸಹಿತ ಹಲವು ವಿಭಾಗಗಳಲ್ಲಿ ಈ ಮರುಪಾವತಿಯಗದ ಸಾಲದ ಸಮಸ್ಯೆ ವ್ಯಾಪಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.