ಪ್ರಧಾನಿಯಾಗುವ ರಾಹುಲ್ ಹೇಳಿಕೆಯಲ್ಲಿ ತಪ್ಪಿಲ್ಲವೆಂದ ಎನ್ಸಿಪಿ
Team Udayavani, May 9, 2018, 12:23 PM IST
ಮುಂಬಯಿ: ತನ್ನ ಪಕ್ಷ 2019ರ ಲೋಕ ಸಭಾ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆದ್ದಲ್ಲಿ ತಾನು ಪ್ರಧಾನಿಯಾಗುವುದಕ್ಕೆ ಸಿದ್ಧನೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆಯಲ್ಲಿ ತಪ್ಪೇನೂ ಇಲ್ಲವೆಂದು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಹೇಳಿದೆ.
2004ರಿಂದ 2014ರವ ರೆಗೆ ಯುಪಿಎ ಸರಕಾರದಲ್ಲಿ ಪಾಲುದಾರನಾಗಿದ್ದ ಎನ್ಸಿಪಿ ಮುಂದಿನ ವರ್ಷ ನಡೆ ಯುವ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಜತೆ ಕೈಜೋ ಡಿ ಸುವ ನಿರೀಕ್ಷೆ ಇದೆ. ರಾಹುಲ್ ಅವರ ಹೇಳಿಕೆಯನ್ನು ಆಕ್ಷೇಪಿಸುವುದಕ್ಕೇನೂ ಇಲ್ಲ. “ಜನರು ದೇಶವನ್ನು ಆಳುವ ಹೊಣೆಯನ್ನು ಕಾಂಗ್ರೆಸ್ಗೆ ವಹಿಸಲು ನಿರ್ಧರಿಸಿದರೆ ರಾಹುಲ್ ಅವರು ಪ್ರಧಾನಿ ಹುದ್ದೆ ಅಭ್ಯರ್ಥಿಯಾಗುವರು’ ಎಂದು ಎನ್ಸಿಪಿ ರಾಷ್ಟ್ರೀಯ ವಕ್ತಾರ ನವಾಬ್ ಮಲಿಕ್ ಹೇಳಿದರು.
ಎನ್ಸಿಪಿ ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸುವುದರಿಂದ ಮತ್ತು ಸೀಮಿತ ಸಂಖ್ಯೆಯ ಸಂಸದರನ್ನು ಹೊಂದಿರುವುದರಿಂದ ಪಕ್ಷಾಧ್ಯಕ್ಷ ಶರದ್ ಪವಾರ್ ಅವರು ಈ ಹಿಂದೆಯೇ ತಾವು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿ ಇಲ್ಲವೆಂದು ಹೇಳಿದ್ದರು ಎಂದು ಮಲಿಕ್ ತಿಳಿಸಿದರು.
ಈ ಮುನ್ನ ಬೆಂಗಳೂರಿನಲ್ಲಿ ಮಂಗಳವಾರ ರಾಹುಲ್ ಅವರು ಚುನಾವಣಾ ಸಭೆಯೊಂದರಲ್ಲಿ ಮಾತನಾಡುತ್ತ 2019ರ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೆ ತಾನು ಪ್ರಧಾನಿಯಾಗುವು ದಕ್ಕೆ ಸಿದ್ಧನೆಂದು ಹೇಳಿದ್ದರು. ನೀವು ಮುಂದಿನ ಪ್ರಧಾನಿಯಾಗುವಿರಾ ಎಂದು ಅವರನ್ನು ಪ್ರಶ್ನಿಸಿದಾಗ ಅವರು, “ಇದು ಅನೇಕ ವಿಚಾರಗಳನ್ನು ಅವಲಂಬಿಸಿರುವುದು. ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಉತ್ತಮ ಸಾಧನೆ ತೋರುತ್ತದೆ, ಅಂದರೆ ಅದು ಅತಿ ದೊಡ್ಡ ಪಕ್ಷವಾಗಿ ಮೂಡಿ ಬರುವುದೇ ಎಂಬುದನ್ನು ಇದು ಅವಲಂಬಿಸಿರುತ್ತದೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.