ಉಗ್ರರ ತಂತ್ರಜ್ಞಾನದ ಮೇಲೆ ನಿಗಾ ಬೇಕು
Team Udayavani, Jun 25, 2021, 7:08 AM IST
ಹೊಸದಿಲ್ಲಿ: ಪಾಕಿಸ್ಥಾನದಲ್ಲಿರುವ ಲಷ್ಕರ್-ಎ-ತಯ್ಯಬಾ (ಎಲ್‌ಇಟಿ) ಹಾಗೂ ಜೈಷ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗಳ ಉಗ್ರರು ಬಳಸುವ ಹೊಸ ತಂತ್ರಜ್ಞಾನಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಬೇಕೆಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.
ತಜಕಿಸ್ಥಾನದ ರಾಜಧಾನಿ ಡ್ಯುಶಾಂಬೆಯಲ್ಲಿ ನಡೆದ ಶಾಂಘೈ ಸಹಕಾರ ಒಕ್ಕೂಟದ (ಎಸ್‌ಸಿಒ) ಸದಸ್ಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಉಗ್ರರು ತಮ್ಮ ಭಯೋತ್ಪಾದನೆ ಕೃತ್ಯಗಳಿಗೆ ಡ್ರೋನ್‌ನಂಥ ಅತ್ಯಾಧುನಿಕ ಪರಿಕರಗಳು ಹಾಗೂ ಡಾರ್ಕ್ ವೆಬ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಬ್ಲಾಕ್‌ಚೈನ್‌ನಂಥ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದ್ದಾರೆ. ಮತ್ತೂಂದೆಡೆ, ಸಾಮಾಜಿಕ ಜಾಲತಾಣಗಳನ್ನೂ ಉಪಯೋಗಿಸುತ್ತಿದ್ದಾರೆ. ನಾವು (ರಕ್ಷಣ ಸಲಹೆಗಾರರು) ಇಂಥ ಆಧುನಿಕ ಪರಿಕರಗಳು, ತಂತ್ರಜ್ಞಾನಗಳ ಬಗ್ಗೆ ತೀವ್ರ ನಿಗಾ ಇಡಬೇಕಿದೆ ಎಂದರು.
ಉಗ್ರವಾದವು ಯಾವುದೇ ಸ್ವರೂಪದಲ್ಲಿದ್ದರೂ ಅದು ಖಂಡನಾರ್ಹ ಎಂದ ದೋವಲ್, ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರರೆಂದು ಘೋಷಿಸಲ್ಪಟ್ಟ ವ್ಯಕ್ತಿಗಳ ವಿರುದ್ಧ ಸಂಬಂಧಪಟ್ಟ ದೇಶಗಳು ಕಠಿನ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.