Oath Ceremony: ಮಹಾಯುತಿ ಪ್ರಮಾಣ ವೇಳೆ ಮೊಬೈಲ್, ಸರ, ಪರ್ಸ್ ಕಳವು!
ಒಟ್ಟು 12 ಲಕ್ಷ ರೂ. ವಸ್ತುಗಳು ನಾಪತ್ತೆ, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್: ಪೊಲೀಸರು
Team Udayavani, Dec 9, 2024, 3:44 AM IST
ಮುಂಬೈ: ದಕ್ಷಿಣ ಮುಂಬೈನ ಅಜಾದ್ ಮೈದಾನದಲ್ಲಿ ಡಿ.5ರಂದು ನಡೆದ ಮಹಾಯುತಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರ ಚಿನ್ನದ ಆಭರಣಗಳು, ಮೊಬೈಲ್ ಫೋನ್‌ಗಳು ಹಾಗೂ ಹಣ ಸೇರಿದಂತೆ ಒಟ್ಟು 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಕಾರ್ಯಕ್ರಮದ ಭದ್ರತೆಗಾಗಿ 4000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದರ ಹೊರತಾಗಿಯೂ ಕಾರ್ಯಕ್ರಮ ಮುಗಿದ ಬಳಿಕ ಮೈದಾನದ 2ನೇ ಗೇಟ್ ಮೂಲಕ ಜನರೆಲ್ಲರೂ ಗುಂಪಾಗಿ ಹೊರಹೋಗುತ್ತಿದ್ದ ಸಮಯದಲ್ಲಿ ಕಳ್ಳರು ಆಭರಣಗಳು, ಮೊಬೈಲ್, ಪರ್ಸ್‌ಗಳನ್ನು ಕಳ್ಳತನ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಯುತ್ತಿದೆ. ಸದ್ಯ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.