Oberoi Group; ಹೆಸರಾಂತ ಹೋಟೆಲ್ ಉದ್ಯಮಿ ಪಿಆರ್ ಎಸ್ ಒಬೆರಾಯ್ ಇನ್ನಿಲ್ಲ
Team Udayavani, Nov 14, 2023, 10:44 AM IST
ನವದೆಹಲಿ: ಭಾರತೀಯ ಆತಿಥ್ಯ ವಲಯದ ಮುಖ್ಯಸ್ಥ ಎಂದು ಕರೆಯಲ್ಪಡುವ ಒಬೆರಾಯ್ ಗ್ರೂಪ್ ನ ಅಧ್ಯಕ್ಷ ಪೃಥ್ವಿ ರಾಜ್ ಸಿಂಗ್ ಒಬೆರಾಯ್ ಅವರು ಮಂಗಳವಾರ ನಿಧನರಾದರು. “ಒಬೆರಾಯ್ ಗ್ರೂಪ್ ನ ಅಧ್ಯಕ್ಷ ಪಿಆರ್‌ಎಸ್ ಒಬೆರಾಯ್ ಅವರು ಇಂದು ಮುಂಜಾನೆ ಶಾಂತಿಯುತವಾಗಿ ನಿಧನರಾಗಿರುವುದನ್ನು ನಾವು ತೀವ್ರ ದುಃಖದಿಂದ ತಿಳಿಸುತ್ತೇವೆ” ಎಂದು ಹೇಳಿಕೆ ತಿಳಿಸಿದೆ.
ಆತಿಥ್ಯ ಉದ್ಯಮದಲ್ಲಿ ಒಬೆರಾಯ್ ಅವರ ಪರಂಪರೆಯು ಗಡಿಗಳನ್ನು ಮೀರಿದೆ, ಇದು ಜಾಗತಿಕವಾಗಿ ಅಳಿಸಲಾಗದ ಗುರುತು ಉಂಟುಮಾಡಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಪ್ರವಾಸೋದ್ಯಮ ಮತ್ತು ಆತಿಥ್ಯದಲ್ಲಿ ದೇಶಕ್ಕೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಪಿಆರ್ ಎಸ್ ಒಬೆರಾಯ್ ಅವರು ಪದ್ಮವಿಭೂಷಣ ಸೇರಿ ಹಲವಾರು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ಪಡೆದರು.
ಅವರ ಅಸಾಧಾರಣ ನಾಯಕತ್ವ ಮತ್ತು ದೃಷ್ಟಿಕೋನವನ್ನು ಗುರುತಿಸಿ ಐಎಲ್‌ಟಿಎಂ (ಅಂತಾರಾಷ್ಟ್ರೀಯ ಐಷಾರಾಮಿ ಟ್ರಾವೆಲ್ ಮಾರ್ಕೆಟ್) ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಹ ಅವರಿಗೆ ನೀಡಿ ಗೌರವಿಸಲಾಯಿತು. ಪಿಎಆರ್ಎಸ್ ಒಬೆರಾಯ್ ಅವರಿಗೆ ಅಮೆರಿಕದ HOTELS ನಿಯತಕಾಲಿಕವು ‘ಕಾರ್ಪೊರೇಟ್ ಹೊಟೇಲಿಯರ್ ಆಫ್ ದಿ ವರ್ಲ್ಡ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.